‘ಹಿಂದಿ ತೊಲಗಿಸಿ ಕನ್ನಡ ಉಳಿಸಿ’ ಆಂದೋಲನ

ಬುಧವಾರ, ಜೂನ್ 26, 2019
24 °C
ದ್ವಿಭಾಷಾ ಸೂತ್ರ ಅಂಗೀಕಾರಕ್ಕೆ ಒತ್ತಾಯ

‘ಹಿಂದಿ ತೊಲಗಿಸಿ ಕನ್ನಡ ಉಳಿಸಿ’ ಆಂದೋಲನ

Published:
Updated:

ಬೆಂಗಳೂರು: ಹಿಂದಿ ಹೇರಿಕೆ ವಿರುದ್ಧ ತ್ರಿಭಾಷಾ ಸೂತ್ರ ತಿರಸ್ಕರಿಸಿ, ದ್ವಿಭಾಷಾ ಸೂತ್ರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ  ದ್ರಾವಿಡ ಜನಶಕ್ತಿ ಕರ್ನಾಟಕ ಸಂಘಟನೆಯು ಜುಲೈ 1ರಿಂದ ರಾಜ್ಯದಾದ್ಯಂತ ‘ಹಿಂದಿ ತೊಲಗಿಸಿ ಕನ್ನಡ ಉಳಿಸಿ’ ಎಂಬ ಆಂದೋಲನ ಹಮ್ಮಿಕೊಂಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಹೆಣ್ಣೂರು ಲಕ್ಷ್ಮೀನಾರಾಯಣ, ‘ತ್ರಿಭಾಷಾ ಸೂತ್ರದ ನೆಪದಲ್ಲಿ ಹಿಂದಿಯನ್ನು ದೇಶವ್ಯಾಪಿ ಕಡ್ಡಾಯಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸುತ್ತೇವೆ’ ಎಂದು ಹೇಳಿದರು.

‘ತ್ರಿಭಾಷಾ ಸೂತ್ರವನ್ನು ರದ್ದುಪಡಿಸಿ ದ್ವಿಭಾಷಾ ಸೂತ್ರವನ್ನು ಅಂಗೀಕರಿಸುವ ನಿರ್ಣಯವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲೇ ಅಂಗೀಕರಿಸಬೇಕು’ ಎಂದು ಅವರು ಒತ್ತಾಯಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !