ಶ್ರೀಲಂಕಾ: ಪ್ರಧಾನಿ ಗೃಹ ಕಚೇರಿ ಭದ್ರತಾ ಸಿಬ್ಬಂದಿ ಆತ್ಮಹತ್ಯೆ

ಶನಿವಾರ, ಏಪ್ರಿಲ್ 20, 2019
29 °C

ಶ್ರೀಲಂಕಾ: ಪ್ರಧಾನಿ ಗೃಹ ಕಚೇರಿ ಭದ್ರತಾ ಸಿಬ್ಬಂದಿ ಆತ್ಮಹತ್ಯೆ

Published:
Updated:

ಕೊಲಂಬೊ: ಶ್ರೀಲಂಕಾ ಪ್ರಧಾನಿ ರನಿಲ್‌ ವಿಕ್ರಮಸಿಂಘೆ ಅವರ ಅಧಿಕೃತ ನಿವಾಸದ ಭದ್ರತೆಗೆ ನಿಯೋಜನೆಗೊಂಡಿದ್ದ ವಿಶೇಷ ರಕ್ಷಣಾ ಪಡೆಯ ಹಿರಿಯ ಅಧಿಕಾರಿ ದಿಲ್‌ರುಕ್ಷ ಸಮರಸಿಂಘೆ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಧಾನಿ ನಿವಾಸ ಇರುವ ದೇವಸ್ಥಾನದ ಹತ್ತಿರ ಸ್ಥಾಪಿಸಲಾಗಿರುವ ಭದ್ರತಾ ಕೇಂದ್ರದಲ್ಲಿ ತಮ್ಮ ರಿವಾಲ್ವಾರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೊಲಂಬೊ ವೆಬ್‌ಸೈಟ್ ವರದಿ ಮಾಡಿದೆ.

ಗುಂಡು ಹಾರಿಸಿಕೊಂಡ ತಕ್ಷಣವೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

 

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !