ಲ್ಯಾಪ್‌ಟಾಪ್‌, ತ್ರಿಚಕ್ರ ವಾಹನ ವಿತರಣೆ

7

ಲ್ಯಾಪ್‌ಟಾಪ್‌, ತ್ರಿಚಕ್ರ ವಾಹನ ವಿತರಣೆ

Published:
Updated:
Deccan Herald

ಬೆಂಗಳೂರು: ‘ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ದೊರೆಯಬೇಕು’ ಎಂದು ಪಾಲಿಕೆ ಸದಸ್ಯೆ ಪದ್ಮಾವತಿ ಶ್ರೀನಿವಾಸ್ ತಿಳಿಸಿದರು.

ಕೆ.ಆರ್.ಪುರ ಸಮೀಪದ ಕೆ.ಚನ್ನಸಂದ್ರದಲ್ಲಿ ಹಮ್ಮಿಕೊಂಡಿದ್ದ ರಾಮಮೂರ್ತಿ ನಗರ ವಾರ್ಡ್ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳಿಗೆ 5 ತಳ್ಳುವ ಗಾಡಿ, 6 ಲ್ಯಾಪ್‌ಟಾಪ್, 2 ತ್ರಿಚಕ್ರ ವಾಹನಗಳನ್ನು ವಿತರಿಸಿದರು. ವಿತರಿಸಿ ಮಾತನಾಡಿದರು.

‘ವಾರ್ಡ್‌ನಲ್ಲಿ ಕೆಲ ಸಮಸ್ಯೆಗಳಿರುವುದು ನನ್ನ ಗಮನಕ್ಕೆ ಬಂದಿದ್ದು, ಆದಷ್ಟು ಬೇಗ ಹೆಚ್ಚಿನ ಅನುದಾನವನ್ನು ತಂದು ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಪಾಲಿಕೆಯಲ್ಲಿ ಹೆಚ್ಚಿನ ಅನುದಾನ ಸಿಗದ ಕಾರಣ ಅಭಿವೃದ್ಧಿಗೆ ಸ್ವಲ್ಪ ಹಿನ್ನಡೆಯಾಗಿದೆ’ ಎಂದರು.

‘ರಾಮಮೂರ್ತಿ ನಗರ ವಾರ್ಡ್‌ನಲ್ಲಿ ಬಿಜೆಪಿ ಗೆದ್ದಿದೆ ಎಂಬ ಕಾರಣಕ್ಕೆ ಪಾಲಿಕೆ ಸದಸ್ಯರು ಅಭಿವೃದ್ಧಿ ಕಾರ್ಯ ಗಳು ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಹೇಳಿಕೆಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ನಾನು ಸದಸ್ಯೆಯಾಗಿ ಆಯ್ಕೆಯಾದಗಿನಿಂದ ಹಲವಾರು ಅಭಿವೃದ್ಧಿ ಕಾರ್ಯಗಳಾಗಿವೆ’ ಎಂದರು.

‘ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನನ್ನ ಅಧಿಕಾರದ ಅವಧಿ ಮುಗಿಯುವ ಮುನ್ನ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತೇನೆ ಎಂದರು. ಮಹಿಳೆಯರು ಸ್ವಾವಲಂಬಿಯಾಗಲು ಪ್ರತಿ ವಾರ್ಡ್‌ಗೆ ಐವತ್ತು ಟೈಲರಿಂಗ್ ಯಂತ್ರಗಳ ಅವಶ್ಯಕತೆ ಇದೆ. ಸರ್ಕಾರ ಟೈಲರಿಂಗ್ ಯಂತ್ರಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !