ಪಕ್ಷಗಳಿಂದ ಅಬ್ಬರದ ಪ್ರಚಾರ; 16ರಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ

ಬುಧವಾರ, ಏಪ್ರಿಲ್ 24, 2019
23 °C

ಪಕ್ಷಗಳಿಂದ ಅಬ್ಬರದ ಪ್ರಚಾರ; 16ರಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ

Published:
Updated:
Prajavani

ಚಾಮರಾಜನಗರ: ಏಪ್ರಿಲ್‌ 18ರಂದು ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅವಧಿ ಮಂಗಳವಾರ ಸಂಜೆ 6 ಗಂಟೆಗೆ ಮುಕ್ತಾಯವಾಲಿದ್ದು, ಗಡುವು ಹತ್ತಿರವಾಗುತ್ತಿದ್ದಂತೆಯೇ ಪಕ್ಷಗಳು ಪ್ರಚಾರದ ಅಬ್ಬರವನ್ನು ಮತ್ತಷ್ಟು ಹೆಚ್ಚಿಸಿವೆ. 

ಕಾಂಗ್ರೆಸ್‌, ಬಿಜೆಪಿ ಮತ್ತು ಬಿಎಸ್‌ಪಿಗಳು ಗ್ರಾಮೀಣ ಮಟ್ಟದಲ್ಲಿ ಪ್ರಚಾರ ಸಭೆಗಳನ್ನು ಈಗಾಗಲೇ ಬಹುತೇಕ ಪೂರ್ಣಗೊಳಿಸಿದ್ದು ಕೊನೆಯ ಎರಡು ದಿನಗಳಲ್ಲಿ ಪಟ್ಟಣ ಹಾಗೂ ನಗರ ಪ್ರದೇಶಗಳನ್ನು ಕೇಂದ್ರೀಕರಿಸಿ ಪ್ರಚಾರ ನಡೆಸುತ್ತಿವೆ. ಪಟ್ಟಣಗಳಲ್ಲಿ ಧ್ವನಿವರ್ಧಕದ ಮೂಲಕ ಬಿರುಸಿನ ಪ್ರಚಾರ ನಡೆಸಲಾಗುತ್ತಿದೆ. 

ಅಭ್ಯರ್ಥಿಗಳು ಖುದ್ದಾಗಿ ಬರಲು ಆಗದ ಕಡೆಗಳಲ್ಲಿ ಜಿಲ್ಲಾ ಮುಖಂಡರು, ಸ್ಥಳೀಯ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಬಹಿರಂಗ ಪ್ರಚಾರದ ಕೊನೆಯ ದಿನ ಪಕ್ಷಗಳು ಸಾರ್ವಜನಿಕ ಸಭೆಗಳನ್ನು ಏರ್ಪಡಿಸಿ ಮತಯಾಚಿಸಲಿವೆ.

ಸೆಳೆಯಲು ಪ್ರಯತ್ನ: ಈ ಮಧ್ಯೆ, ರಾಜಕೀಯ ಪಕ್ಷಗಳು ಎದುರಾಳಿ ಪಕ್ಷದ ಮುಖಂಡರನ್ನು ಸೆಳೆಯಲು ಕೊನೆ ಗಳಿಗೆಯ ಪ್ರಯತ್ನ ನಡೆಸುತ್ತಿವೆ. ಇದರಿಂದ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಬಹುದು ಎಂಬುದು ಅವುಗಳ ಲೆಕ್ಕಾಚಾರ. ಸೆಳೆಯಲು ಆಗದಿದ್ದರೂ ಕನಿಷ್ಠ ಪಕ್ಷ ಅವರು ತಟಸ್ಥರಾಗುವಂತೆ ನೋಡಿಕೊಳ್ಳಲೂ ಪಕ್ಷಗಳ ಮುಖಂಡರು ಯತ್ನಿಸುತ್ತಿದ್ದಾರೆ. 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !