ವಕೀಲನ ಬಂಧನ: ತನಿಖೆಗೆ ಎರಡು ದಿನಗಳ ಗಡುವು

7
ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ ವಕೀಲರ ಸಂಘ

ವಕೀಲನ ಬಂಧನ: ತನಿಖೆಗೆ ಎರಡು ದಿನಗಳ ಗಡುವು

Published:
Updated:

ಚಾಮರಾಜನಗರ: ‘ಜಿಲ್ಲಾ ವಕೀಲರ ಸಂಘದ ಸದಸ್ಯ, ಗುಂಡ್ಲುಪೇಟೆಯ ವಕೀಲ ರವಿ ಮೇಲೆ ಯಾವುದೇ ಸಕಾರಣವಿಲ್ಲದೆ ಅಲ್ಲಿನ ಸರ್ಕಲ್‌ ಇನ್‌ಸ್ಪೆಕ್ಟರ್‌ ಬಾಲಕೃಷ್ಣ ಅವರು ಪ್ರಕರಣ ದಾಖಲಿಸಿರುವ ಸಂಬಂಧ ಎರಡು ದಿನಗಳಲ್ಲಿ ಸೂಕ್ತ ತನಿಖೆಯಾಗಬೇಕು. ಇಲ್ಲವಾದರೆ ರಾಜ್ಯ ವಕೀಲರ ಪರಿಷತ್‌ ಬೆಂಬಲದೊಂದಿಗೆ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ’ ಎಂದು ಜಿಲ್ಲಾ ವಕೀಲರ ಸಂಘ ಎಚ್ಚರಿಕೆ ನೀಡಿದೆ.

‘ಈ ಪ್ರಕರಣವನ್ನು ಖಂಡಿಸಿ ವಕೀಲರು ಮೂರು ದಿನಗಳಿಂದ ನ್ಯಾಯಾಲಯ ಕಲಾಪದಿಂದ ಅನಿರ್ದಿಷ್ಟಾವಧಿವರೆಗೆ ಹೊರಗುಳಿದಿದ್ದೇವೆ. ಸೌಜನ್ಯಕಾದರೂ ಪೊಲೀಸ್‌ ವರಿಷ್ಠಾಧಿಕಾರಿ ಅವರು ನಮ್ಮನ್ನು ಭೇಟಿ ಮಾಡಿಲ್ಲ. ಆದ್ದರಿಂದ ಶೀಘ್ರವೇ ಈ ಪ್ರಕರಣಕ್ಕೆ ಮುಕ್ತಿ ನೀಡಬೇಕು’ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್‌ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ವಕೀಲ ರವಿ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಗುಂಡ್ಲುಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಬಾಲಕೃಷ್ಣ ಮತ್ತು ಸಬ್ ಇನ್‌ಸ್ಪೆಕ್ಟರ್ ಲತೇಶ್ ಕುಮಾರ್ ಅವರ ವಿರುದ್ದ ಉನ್ನತ ಮಟ್ಟದ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕೂಡಲೇ ಅವರನ್ನು ಅಮಾನತುಗೊಳಿಸಬೇಕು’ ಎಂದು ಹೇಳಿದರು.

‘ದುರುದ್ದೇಶದಿಂದ ವಕೀಲರ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವುದು ವಕೀಲ ಸಮುದಾಯಕ್ಕೆ ಮಾಡಿದ ಅವಮಾನ. ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿರುವ ಪೊಲೀಸರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು. ಪೊಲೀಸ್‌ ಹಾಗೂ ವಕೀಲರ ನಡುವೆ ಉತ್ತಮ ಬಾಂಧವ್ಯ ಇರಬೇಕು. ಆದರೆ, ಇಲ್ಲಿ ಅದಿಲ್ಲ ಎಂದರು.

ದೂರು ಸಲ್ಲಿಕೆ: ಪ್ರಕರಣ ಸಂಬಂಧ ಮುಂದಿನ ದಿನಗಳಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರ ದೂರು ಪೆಟ್ಟಿಗೆ ಮತ್ತು ಖಾಸಗಿ ದೂರು ದಾಖಲು ಮಾಡಲಾಗುವುದು ಎಂದು ತಿಳಿಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !