ವಕೀಲರ ಪ್ರತಿಭಟನೆ ಮುಂದುವರಿಕೆ

ಚಾಮರಾಜನಗರ: ಜಿಲ್ಲಾ ವಕೀಲ ಸಂಘದ ಸದಸ್ಯ, ಗುಂಡ್ಲುಪೇಟೆ ತಾಲ್ಲೂಕಿನ ವಕೀಲ ರವಿ ಅವರ ಮೇಲೆ ಅಲ್ಲಿನ ಸರ್ಕಲ್ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಪ್ರಕರಣ ದಾಖಲಿಸಿ ಬಂಧಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘವು ನ್ಯಾಯಾಲಯ ಕಲಾಪಗಳಿಂದ ಹೊರಗುಳಿದು ಆರನೇ ದಿನವಾದ ಸೋಮವಾರವೂ ಪ್ರತಿಭಟನೆ ನಡೆಸಿತು.
ಬಾಲಕೃಷ್ಣ ಮತ್ತು ಸಬ್ ಇನ್ಸ್ಪೆಕ್ಟರ್ ಲತೇಶ್ ಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಲು ಮೇಲಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ಕಾನೂನಿಗೇ ದ್ರೋಹ ಬಗೆಯುತ್ತಿದ್ದಾರೆ. ಸರ್ಕಾರ ಕೂಡ ಈ ಬಗ್ಗೆ ಏನೂ ಕ್ರಮ ಕೈಗೊಂಡಿಲ್ಲ. ಪೊಲೀಸರ ದೌರ್ಜನ್ಯದ ವಿರುದ್ಧ ಮಂಗಳವಾರದಿಂದ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಸಿದರು.
ವಕೀಲರ ಪ್ರತಿಭಟನೆಗೆ ಜಿಲ್ಲೆಯ ಇತರ ವಕೀಲರ ಸಂಘ ಹಾಗೂ ಕರ್ನಾಟಕ ರಕ್ಷಣಾ ಸೇನೆ ಬೆಂಬಲ ವ್ಯಕ್ತಪಡಿಸಿದೆ.
ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಉಪಾಧ್ಯಕ್ಷ ಶಿವಪ್ರಸನ್ನ, ಜಂಟಿ ಕಾರ್ಯದರ್ಶಿ ದಲಿತ್ರಾಜ್, ಖಜಾಂಚಿ ಮಹಾಲಿಂಗಸ್ವಾಮಿ, ಕಾರ್ಯಕಾರಿ ಸಮಿತಿ ಸದಸ್ಯ, ಎಚ್.ಎಸ್.ಮಹೇಂದ್ರ, ಆರ್.ಗಿರೀಶ್, ಮೋಹನ್ ಜಗದೀಶ್, ವಕೀಲರಾದ ಪುಟ್ಟರಾಜು, ರಾಮಸಮುದ್ರ ಪುಟ್ಟಸ್ವಾಮಿ, ಬಿ.ಜಿ.ಜಯಪ್ರಕಾಶ್ ಇದ್ದರು.
ಬರಹ ಇಷ್ಟವಾಯಿತೆ?
0
0
0
0
0
0 comments
View All