ಉಳ್ಳಾಲ: ನಾಡಿನ ಹೆಮ್ಮೆಯ ಕಲೆ ಯಕ್ಷಗಾನ ಸರ್ಕಾರದಿಂದ ಅಥವಾ ಪ್ರಾಧಿಕಾರದಿಂದ ಬೆಳೆದು ಬಂದಿಲ್ಲ. ಅದು ಜನರಿಂದಲೇ ಉಳಿದಿದೆ ಎಂದು ವಿಶ್ರಾಂತ ಕುಲಪತಿ ಪ್ರೊ. ಬಿ.ಎ ವಿವೇಕ ರೈ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಗುರುವಾರ ಆಯೋಜಿಸಿದ್ದ ಪ್ರೊ.ಬಿ.ಎ. ವಿವೇಕ ರೈ ಅವರ ವಿದ್ಯಾರ್ಥಿ–ಕಲಾವಿದರ ಕಲಾಭಿನಂದನೆ ಮತ್ತು ತಾಳಮದ್ದಲೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯಕ್ಷಗಾನ ಕಲಿಕೆಯಿಂದ ಹವ್ಯಾಸ ಬೆಳೆದು ಉದ್ಯೋಗದ ಅವಕಾಶವೂ ದೊರೆಯುತ್ತದೆ. ಜೊತೆಯಲ್ಲಿ ಮಾನಸಿಕ ನೆಮ್ಮದಿಯೂ ಸಿಗುತ್ತದೆ. ಈ ಕಲೆಯನ್ನು ವ್ರತದಂತೆ ಅಭ್ಯಾಸ ಮಾಡಬೇಕು ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಮಾತನಾಡಿ ವಿವೇಕ್ ರೈ ಅವರಿಲ್ಲದಿದ್ದರೆ ವಿಶ್ವವಿದ್ಯಾನಿಲಯದ ಪರಿಕಲ್ಪನೆಯೇ ಮೂಡಲು ಸಾಧ್ಯವಿರಲಿಲ್ಲ ಎಂದರು.

ಅಭಿವಂದನಾ ನುಡಿಗಳನ್ನಾಡಿದ ಯಕ್ಷಗಾನ ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್ ಅವರು ಪ್ರೊ.ವಿವೇಕ ರೈ ಸಂಶೋಧನೆ, ಜಾನಪದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದರು. ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಧನಂಜಯ ಕುಂಬ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಯಿಸುಮ ನಾವಡ ನಿರೂಪಿಸಿದರು.

ಭೀಷ್ಮಾರ್ಜುನ ಕಾಳಗ ತಾಳಮದ್ದಳೆಯಲ್ಲಿ ಭಾಗವತರಾಗಿ ಸುಬ್ರಾಯ ಸಂಪಾಜೆ, ಚೆಂಡೆ/ಮದ್ದಲೆಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಅರ್ಥಧಾರಿಗಳಾಗಿ ಗಣರಾಜ ಕುಂಬಳೆ, ರಾಧಾಕೃಷ್ಣ ಕಲ್ಚಾರ್, ನಾಗವೇಣಿ ಮಂಚಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-29-885483352

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.