ಮಂಗಳವಾರ, ಮೇ 17, 2022
27 °C

ಪ್ಯಾಕೇಜ್‌ ಪ್ರವಾಸ| ಭಕ್ತರಿಗೆ ಧರ್ಮಸ್ಥಳದಲ್ಲಿ ವಿಶೇಷ ದರ್ಶನ ವ್ಯವಸ್ಥೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಆಯೋಜಿಸುವ ಪ್ಯಾಕೇಜ್‌ ಪ್ರವಾಸದಲ್ಲಿ ಬರುವ ಭಕ್ತರಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ದರ್ಶನದ ವ್ಯವಸ್ಥೆ ಕಲ್ಪಿಸುವಂತೆ ನಿಗಮದ ಅಧ್ಯಕ್ಷೆ ಶೃತಿ ಅವರು ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಶೃತಿ, ಈ ಕುರಿತ ಮನವಿ ಪತ್ರ ಸಲ್ಲಿಸಿದರು. ನಿಗಮವು ಆಯೋಜಿಸುವ ಪ್ಯಾಕೇಜ್‌ ಪ್ರವಾಸಗಳಲ್ಲಿ ಧರ್ಮಸ್ಥಳ ಭೇಟಿಯು ಪ್ರಮುಖವಾಗಿದೆ. ಪ್ಯಾಕೇಜ್‌ ಪ್ರವಾಸದಲ್ಲಿ ಬರುವ ಭಕ್ತರಿಗೆ ವಿಶೇಷ ದರ್ಶನದ ವ್ಯವಸ್ಥೆಯ ಮೂಲಕ ತ್ವರಿತವಾಗಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿದರೆ ಅನುಕೂಲವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಭೇಟಿಯ ವೇಳೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಉಪಸ್ಥಿತರಿದ್ದರು. ನಿಗಮದ ಬೇಡಿಕೆ ಕುರಿತು ಕ್ಷೇತ್ರಕ್ಕೆ ಹಿಂದಿರುಗಿದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ವೀರೇಂದ್ರ ಹೆಗ್ಗಡೆ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು