ಸ್ವತಂತ್ರ ಧರ್ಮಕ್ಕೆ ಕೇಂದ್ರ ಸರ್ಕಾರ ಮಾನ್ಯತೆ ನೀಡುತ್ತಿಲ್ಲ: ಮಾತೆ ಮಹಾದೇವಿ ದೂರು

7

ಸ್ವತಂತ್ರ ಧರ್ಮಕ್ಕೆ ಕೇಂದ್ರ ಸರ್ಕಾರ ಮಾನ್ಯತೆ ನೀಡುತ್ತಿಲ್ಲ: ಮಾತೆ ಮಹಾದೇವಿ ದೂರು

Published:
Updated:

ಬೆಂಗಳೂರು:‘ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ’ ಎಂದು ಬಸವ ಧರ್ಮದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ದೂರಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ಹಿಂದಿನ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಂಡು, ಇದರ ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಆದರೆ, ಈವರೆಗೆ ಯಾವುದೇ ನಿರ್ಣಯವನ್ನು ತೆಗೆದುಕೊಂಡಿಲ್ಲ’ ಎಂದು ಹೇಳಿದರು.   

‘ಹಾಗಾಗಿ ಕೇಂದ್ರ ಸರ್ಕಾರವನ್ನು ಎಚ್ಚರಿಸಲು ಬಸವ ಧರ್ಮ ಪೀಠ ಮತ್ತು ರಾಷ್ಟ್ರೀಯ ಬಸವ ದಳದ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್‌ 10, 11 ಮತ್ತು 12ರಂದು ದೆಹಲಿಯ ತಾಲ್ಕಟೋರ್‌ ಒಳಾಂಗಣ ಕ್ರೀಡಾಂಗಣದಲ್ಲಿ ಲಿಂಗಾಯತ ಬೃಹತ್‌ ಸಮಾವೇಶ ಆಯೋಜಿಸಲಾಗಿದೆ’ ಎಂದು ತಿಳಿಸಿದರು. 

ತೀರ್ಪು ಪರಿಶೀಲನೆಯಾಗಲಿ: ‘ವ್ಯಭಿಚಾರ ಅ‍ಪರಾಧವಲ್ಲ ಎಂದು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಆಘಾತಕಾರಿಯಾಗಿದ್ದು, ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಭಾರತೀಯ ಸಾಂಸ್ಕೃತಿಕ ಚೌಕಟ್ಟು ಕುಸಿಯುತ್ತಿದೆ. ಕೌಟುಂಬಿಕ ಸಂಸ್ಕೃತಿಯನ್ನು ನ್ಯಾಯಾಲಯವು ರಕ್ಷಿಸಬೇಕು. ಈ ನಿಟ್ಟಿನಲ್ಲಿ ತೀರ್ಪಿನ ಪರಿಶೀಲನೆಯಾಗಬೇಕು’ ಎಂದು ಆಗ್ರಹಿಸಿದರು. 

Tags: 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !