ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ತೀರ್ಪು: ವಿವಾದಿತ ಭೂಮಿಯಲ್ಲಿ ರಾಮ ಮಂದಿರ; ಮಸೀದಿಗೆ ಪರ್ಯಾಯ ಜಮೀನು
LIVE

ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ–ಬಾಬರಿ ಮಸೀದಿಗೆ ಸಂಬಂಧಿಸಿದ ಬಹುಕಾಲದ ಅನಿಶ್ಚಿತ ಸ್ಥಿತಿ ಕೊನೆಯಾಗಿದೆ. ಭಾರಿ ಕುತೂಹಲಕ್ಕೆ ಕಾರಣವಾಗಿರುವ ನಿವೇಶನ ವಿವಾದದ ತೀರ್ಪನ್ನು ಸುಪ್ರೀಂ ಕೋರ್ಟ್‌ ಶನಿವಾರ ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಸಂವಿಧಾನ ಪೀಠವು ಪ್ರಕರಣದ ವಿಚಾರಣೆಯನ್ನು ಸತತ 40 ದಿನ ನಡೆಸಿ, ಅಕ್ಟೋಬರ್‌ 16ರಂದು ತೀರ್ಪು ಕಾಯ್ದಿರಿಸಿತ್ತು. ತೀರ್ಪಿನಲ್ಲೇನಿತ್ತು? ಶನಿವಾರದ ಬೆಳವಣಿಗೆಗಳೇನು ಎಂಬ ಮಾಹಿತಿ ಇಲ್ಲಿದೆ.
Last Updated 9 ನವೆಂಬರ್ 2019, 10:55 IST
ಅಕ್ಷರ ಗಾತ್ರ
09:5109 Nov 2019

ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್‌ ಒಪ್ಪಿಗೆ ಸೂಚಿಸಿರುವುದು ಸಂತಸ ತಂದಿದೆ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

09:4909 Nov 2019

ಸುಪ್ರೀಂ ಕೋರ್ಟ್ ತೀರ್ಪು ತೃಪ್ತಿಕರವಾಗಿಲ್ಲ ಎಂದು ಎಐಎಂಐಎಂ ವರಿಷ್ಠ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಅಯೋಧ್ಯೆ ವಿವಾದಿತ ಜಾಗ ಬಿಟ್ಟು ಬೇರೆ ಕಡೆ ನೀಡುವ ಜಮೀನು ನಮಗೆ ಬೇಕಾಗಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ. 

08:5609 Nov 2019

ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

08:5209 Nov 2019

ಅಯೋಧ್ಯೆ ತೀರ್ಪನ್ನು ದೇಶದ ಎಲ್ಲರೂ ಸ್ವಾಗತಿಸಬೇಕು ಎಂದು ಕಾಂಗ್ರೆಸ್‌ ಪ್ರಧಾನಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

07:2709 Nov 2019

ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

07:0109 Nov 2019

ಅಯೋಧ್ಯೆ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.

06:5509 Nov 2019

ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ.  ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ ಎಂದು ಜೆಡಿಎಸ್‌ ವರಿಷ್ಠ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ. 

06:5109 Nov 2019

ಸುಪ್ರೀಂ ಕೋರ್ಟ್‌ ಹೊರ ಆವರಣದಲ್ಲಿನರೆದಿರುವ ಜನರು ಮತ್ತು ವಕೀಲರು

06:4209 Nov 2019

ಸುಪ್ರೀಂ ಕೋರ್ಟ್‌ ತೀರ್ಪನ್ನು ನಾವು ಸ್ವಾಗತಿಸುತ್ತೇವೆ, ಈ ತೀರ್ಪು ಯಾರಿಗೋ ಸಂದ ಜಯವಲ್ಲ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ತಿಳಿಸಿದ್ದಾರೆ.

06:3109 Nov 2019

ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ ಎಂದು ಅಯೋಧ್ಯೆ ತೀರ್ಪಿನ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪ್ರತಿಕ್ರಿಯೆ ನೀಡಿದ್ದಾರೆ.