167 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಶನಿವಾರ, ಮೇ 25, 2019
22 °C
ಗುಂಡ್ಲುಪೇಟೆ ಪುರಸಭೆ, ಯಳಂದೂರು, ಹನೂರು ಪಟ್ಟಣ ಪಂಚಾಯಿತಿ ಚುನಾವಣೆ

167 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

Published:
Updated:

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪುರಸಭೆ, ಹನೂರು, ಯಳಂದೂರು ಪಟ್ಟಣ ಪಂಚಾಯಿತಿಗಳ ಚುನಾವಣೆಗೆ ಸಲ್ಲಿಸಲಾಗಿದ್ದ ನಾಮಪತ್ರ ಪರಿಶೀಲನಾ ಕಾರ್ಯ ಶುಕ್ರವಾರ ನಡೆಯಿತು.

173 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 6 ಮಂದಿಯ ನಾಮಪತ್ರ ತಿರಸ್ಕೃತವಾಗಿದ್ದು, 167 ಹುರಿಯಾಳುಗಳ ನಾಮಪತ್ರಗಳು ಅಂಗೀಕಾರವಾಗಿವೆ.

ಗುಂಡ್ಲುಪೇಟೆ ಪುರಸಭೆ ಚುನಾವಣೆಗೆ 78 ಮಂದಿ ಉಮೇದುವಾರಿಕೆ ಸಲ್ಲಿಸಿದ್ದರು. ಇವರಲ್ಲಿ ಇಬ್ಬರ ನಾಮಪತ್ರಗಳು ತಿರಸ್ಕೃತಗೊಂಡಿವೆ. 

ಹನೂರು ಪಟ್ಟಣ ಪಂಚಾಯಿತಿಯಲ್ಲಿ 48 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 44 ಮಂದಿ‌ಯ ನಾಮಪತ್ರ ಕ್ರಮಬದ್ಧವಾಗಿವೆ.

ಯಳಂದೂರು ಪಟ್ಟಣ ಪಂಚಾಯಿತಿಗೆ ಉಮೇದುವಾರಿಕೆ ಸಲ್ಲಿಸಿದ್ದ ಎಲ್ಲ 47 ಮಂದಿಯ ನಾಮಪತ್ರಗಳು ಅಂಗೀಕೃತಗೊಂಡಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !