ಸೋಮವಾರ, ಸೆಪ್ಟೆಂಬರ್ 20, 2021
30 °C

ಲೋಣಿ ಕೆರೆ ತುಂಬಿಸಲು ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಇಂಡಿ: ಭೀಕರ ಬರಗಾಲದಿಂದ ತತ್ತರಿಸಿ ಕುಡಿಯುವ ನೀರು ಇಲ್ಲದೇ ಪರದಾಡುವ ಪರಿಸ್ಥಿತಿಯಲ್ಲಿ ನಾರಾಯಣಪುರ ಎಡದಂಡೆ ಕಾಲುವೆಯ ಮೂಲಕ ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆಗೆ ನೀರು ಹರಿಸಲಾಗಿದೆ.

ಇಂಡಿ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ತಾಲ್ಲೂಕಿನ ಲೋಣಿ (ಕೆಡಿ) ಕೆರೆಯಲ್ಲಿ ನೀರು ಸಂಪೂರ್ಣ ಬತ್ತಿ ಹೋಗಿತ್ತು. ಇದರಿಂದ ಇಂಡಿ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿತ್ತು. ಇದನ್ನರಿತ ಶಾಸಕ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಶಾಸಕ ಯಶವಂತರಾಯಗೌಡ ಪಾಟೀಲ ಪಟ್ಟಣಕ್ಕೆ ನೀರು ಸರಬರಾಜು ಮಾಡುವುದಕ್ಕಾಗಿ ಕಾಲುವೆಗೆ ನೀರು ಹರಿಸಿ ಲೋಣಿ (ಕೆಡಿ) ಕೆರೆ ತುಂಬಿಸಲು ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ಇದರ ಪರಿಣಾಮ ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆಗೆ ನೀರು ಹರಿಸುವ ವ್ಯವಸ್ಥೆ ಮಾಡಿದ್ದು, ಇಷ್ಟರಲ್ಲಿಯೇ ಲೋಣಿ (ಕೆಡಿ) ಕೆರೆ ತುಂಬಿಸಲಾಗುವುದು. ಬರುವ ಮೂರ್ನಾಲ್ಕು ದಿವಸಗಳಲ್ಲಿ ಇಂಡಿ ಪಟ್ಟಣಕ್ಕೆ ನಲ್ಲಿ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಎಂಜಿನಿಯರ್‌ ಬಿ.ವೈ.ಬಿರಾದಾರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.