ಮಾ.2 ರಿಂದ ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನ

7

ಮಾ.2 ರಿಂದ ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನ

Published:
Updated:

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು, ಚಿಕ್ಕಮಗಳೂರಿನಲ್ಲಿ ಮಾರ್ಚ್‌ 2 ಮತ್ತು 3ರಂದು ರಾಜ್ಯಮಟ್ಟದ ಎರಡನೇ ಮಹಿಳಾ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

‘ಕುವೆಂಪು ಕಲಾಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ಸಮ್ಮೇಳನ ನಡೆಯಲಿದ್ದು, ಹಿರಿಯ ಸಾಹಿತಿ ಸುಧಾಮೂರ್ತಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.  

ಸಂಸದೆ ಶೋಭಾ ಕರಂದ್ಲಾಜೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ, ಬರಹಗಾರ್ತಿ ರಾಜೇಶ್ವರಿ ತೇಜಸ್ವಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ ಹಾಗೂ ಚಿಕ್ಕಮಗಳೂರಿನ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮನು ಬಳಿಗಾರ ಅಧ್ಯಕ್ಷತೆ ವಹಿಸಲಿದ್ದಾರೆ. 

ಮಾ.2 ರಂದು, ‘ಕನ್ನಡ ಸಾಹಿತ್ಯ: ಮಹಿಳಾ ನೋಟ’, ‘ಮಹಿಳೆ ಮತ್ತು ಚಳವಳಿ’ ಮತ್ತು ಮಾ.3 ರಂದು ‘ವಿವಿಧ ಕ್ಷೇತ್ರಗಳಿಗೆ ಮಹಿಳೆಯರ ಕೊಡುಗೆ’ ಕುರಿತು ಗೋಷ್ಠಿಗಳು ಹಾಗೂ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದೆ.

ಮಧ್ಯಾಹ್ನ 2.30ರಿಂದ ಕವಿಗೋಷ್ಠಿ ಜರುಗಲಿದ್ದು, ಸಂಜೆ 4.30ರಿಂದ ಸನ್ಮಾನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಎರಡೂ ದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ. 

ಕೋಲಾರದಲ್ಲಿ ದಲಿತ ಸಾಹಿತ್ಯ ಸಮ್ಮೇಳನ: ‘ಮುಂದಿನ ಎರಡು ಮೂರು ತಿಂಗಳೊಳಗಾಗಿ ಕೋಲಾರದಲ್ಲಿ ದಲಿತ ಸಾಹಿತ್ಯ ಸಮ್ಮೇಳನವನ್ನು ನಡೆಸಲಿದ್ದೇವೆ. 10 ದಲಿತ ಸಂಪುಟಗಳನ್ನು ಹೊರತರಲು ಯೋಜಿಸಲಾಗಿದ್ದು, ಈಗಾಗಲೇ 5 ಸಂಪುಟಗಳು ಸಿದ್ಧಗೊಂಡಿವೆ’ ಎಂದು ಬಳಿಗಾರ ತಿಳಿಸಿದರು.

ಕಸಾಪದ ಮಾಜಿ ಅಧ್ಯಕ್ಷ ಹಾಲಂಬಿ ಅವರ ಆಡಳಿತಾವಧಿಯಲ್ಲಿ ಬೆಳಗಾವಿಯಲ್ಲಿ ರಾಜ್ಯಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ ನಡೆದಿತ್ತು.  

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !