7

ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಮಾಹಿತಿ ಬಹಿರಂಗಕ್ಕೆ ಆದೇಶ

Published:
Updated:

ನವದೆಹಲಿ: ದೇಶದ ಎಲ್ಲಾ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪರಿಶೀಲನಾ ವರದಿಗಳು ಆರು ವಾರಗಳ ಒಳಗಾಗಿ ಸಾರ್ವಜನಿಕ ವಲಯಕ್ಕೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರೀಯ ಮಾಹಿತಿ ಆಯೋಗವು ಭಾರತೀಯ ವೈದ್ಯಕೀಯ ಮಂಡಳಿಗೆ (ಎಂಸಿಐ) ನಿರ್ದೇಶನ ನೀಡಿದೆ. 

ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಅನುಮತಿ ನೀಡುವ ಸಲುವಾಗಿ ಎಂಸಿಐ ಪರಿಶೀಲನೆ ನಡೆಸಿ ವರದಿ ನೀಡುತ್ತದೆ.

ಇಂತಹ ವರದಿಗಳಲ್ಲಿ ಅಕ್ರಮ ನಡೆದಿದೆ ಎಂದು ಹಲವು ಪ್ರಕರಣಗಳು ದಾಖಲಾಗಿದ್ದು, ಇವುಗಳ ಕುರಿತು ಸಿಬಿಐ ವಿಚಾರಣೆ ನಡೆಸುತ್ತಿದೆ. ವರದಿಗಳಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ನಿರ್ದೇಶನ ಪ್ರಮುಖ ಹೆಜ್ಜೆಯಾಗಿದೆ. 

‘ಸಾರ್ವಜನಿಕ ವಲಯಕ್ಕೆ ಲಭ್ಯವಾಗದಂತೆ ಪರಿಶೀಲನಾ ವರದಿಗಳನ್ನು ಬಚ್ಚಿಡುವುದರಿಂದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ಕಡಿಮೆಯಾಗಲಿದೆ’ ಎಂದು ಮಾಹಿತಿ ಆಯೋಗದ ಆಯುಕ್ತ ಯಶೋವರ್ಧನ್ ಆಜಾದ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. 

 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !