ಮಲೇರಿಯಾ; ಜಾಗೃತೆಗೆ ಸಲಹೆ

ಸೋಮವಾರ, ಮೇ 20, 2019
30 °C
ವಿಶ್ವ ಮಲೇರಿಯಾ ದಿನದ ಅಂಗವಾಗಿ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರಿಗೆ ಮಾಹಿತಿ

ಮಲೇರಿಯಾ; ಜಾಗೃತೆಗೆ ಸಲಹೆ

Published:
Updated:
Prajavani

ಶಿಡ್ಲಘಟ್ಟ : ಪ್ರತಿ ವರ್ಷ ಏಪ್ರಿಲ್ 25ರಂದು ವಿಶ್ವ ಮಲೇರಿಯಾ ದಿನ ಎಂದು ಆಚರಿಸಲಾಗುತ್ತಿದೆ. ಮಲೇರಿಯಾ ರೋಗದ ತೊಂದರೆಗಳು ಮತ್ತು ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಇದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಮಲೇರಿಯಾ ದಿನದ ಅಂಗವಾಗಿ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಜೊತೆ ಅವರು ಮಾತನಾಡಿದರು.

ಸಾಂಕ್ರಾಮಿಕ ರೋಗದ ಪಟ್ಟಿಯಲ್ಲಿರುವ ಮಲೇರಿಯಾವು ದೈಹಿಕ, ಮಾನಸಿಕವಾಗಿಯೂ ರೋಗಿಯನ್ನು ಕುಂದಿಸುತ್ತದೆ. ಮಲೇರಿಯಾ ಅತಿ ಹೆಚ್ಚು ಉಷ್ಣಾಂಶದ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ನಾವು ಜಾಗರೂಕರಾಗಿರಬೇಕು. ಮಲೇರಿಯಾ ರೋಗದ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ  ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಕೆಲವೊಂದು ವೈಯಕ್ತಿಕ ಜವಾಬ್ದಾರಿಗಳಿಂದ ಮಲೇರಿಯಾ ತಡೆಯಬಹುದು. ಮನೆಯ ಪರಿಸರದಲ್ಲಿ ನೈರ್ಮಲ್ಯ ಕಾಪಾಡಬೇಕು. ಸೊಳ್ಳೆಗಳ ಕೀಟನಾಶಕವನ್ನು ರಾತ್ರಿ ಸಿಂಪಡಿಸಿ, ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಈ ಕ್ರಮದಿಂದ ಸಾಧ್ಯವಾದಷ್ಟು ಮಲೇರಿಯಾ ನಿಯಂತ್ರಿಸಬಹುದು. ಈ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದರು.

ಮಲೇರಿಯಾ ಉಗ್ರ ಸ್ವರೂಪದ ಸಾರ್ವಜನಿಕ ಆರೋಗ್ಯ ಪಿಡುಗಾಗಿದೆ. ಸೊಳ್ಳೆಗಳ ನಿಯಂತ್ರಣಕ್ಕೆ ಮನೆಯ ಸುತ್ತಮುತ್ತಲಿನ ಆವರಣಗಳಲ್ಲಿ ನೀರು ನಿಲ್ಲದಂತೆ ನಿಗಾವಹಿಸಬೇಕು ಎಂದು ವಿವರಿಸಿದರು.

ಕಳೆದ ಒಂದು ವರ್ಷದಲ್ಲಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಲೇರಿಯಾ, ಡೆಂಗಿ, ಚಿಕೂನ್ ಗೂನ್ಯಾ, ಮೆದುಳು ಜ್ವರದ ಪ್ರಕರಣಗಳು ಒಂದೂ ಕಂಡು ಬಂದಿಲ್ಲ.  ಮುಂದಿನ ದಿನಗಳಲ್ಲಿ ನಗರಸಭೆಯವರೊಂದಿಗೆ ಜೊತೆಗೂಡಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಸೊಳ್ಳೆಗಳ ಲಾರ್ವಾ ತಿನ್ನುವ ಪುಟ್ಟ ಮೀನುಗಳನ್ನು ಕೊಡುವ ವ್ಯವಸ್ಥೆ ಕೂಡ ಇದೆ ಎಂದರು.

ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಾಣಿ, ಡಾ.ಸೊನಾಲಿ, ಸಿಬ್ಬಂದಿ ಮುನಿರತ್ನಮ್ಮ, ವಿಜಯ, ಲೋಕೇಶ್, ಉಮೇಶ್, ನಂದಿನಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !