10ರಂದು ಪೋಲಿಯೊ ಲಸಿಕೆ ಕಾರ್ಯಕ್ರಮ

ಭಾನುವಾರ, ಮಾರ್ಚ್ 24, 2019
32 °C
ಜಿಲ್ಲೆಯಲ್ಲಿ 72,751ಮಕ್ಕಳಿಗೆ ಲಸಿಕೆ ನೀಡುವ ಗುರಿ, ಯಶಸ್ವಿಗೆ ಜಿಲ್ಲಾಧಿಕಾರಿ ಮನವಿ

10ರಂದು ಪೋಲಿಯೊ ಲಸಿಕೆ ಕಾರ್ಯಕ್ರಮ

Published:
Updated:
Prajavani

ಚಾಮರಾಜನಗರ: ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಗೆ ಕಾರಣವಾಗುವ ಪೋಲಿಯೊ ರೋಗ ಮುಕ್ತಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಇದೇ 10ರಂದು ನಡೆಯಲಿದ್ದು, ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಆಗ ತಾನೇ ಹುಟ್ಟಿದ ಮಗುವಿನಿಂದ 5 ವರ್ಷದವರೆಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಅಂದಾಜು 72,751 ಮಕ್ಕಳಿಗೆ ಲಸಿಗೆ ನೀಡುವ ಗುರಿ ಹೊಂದಲಾಗಿದೆ. 

ಜಿಲ್ಲೆಯಾದ್ಯಂತ 622 ಬೂತುಗಳನ್ನು ಜಿಲ್ಲಾಡಳಿತ ತೆರೆಯಲಿದೆ. ಮಕ್ಕಳಿಗೆ ಲಸಿಕೆ ಹಾಕಲು 2,488 ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. ಅಲ್ಲದೆ ಕಾರ್ಯಕ್ರಮದ ಮೇಲುಉಸ್ತುವಾರಿಗೆ 130 ಮೇಲ್ವಿಚಾರಕರನ್ನು ನೇಮಿಸಲಾಗಿದೆ. 10 ಸಂಚಾರಿ ಬೂತು ಹಾಗೂ 20 ಟ್ರಾನ್ಸಿಟ್ ಬೂತ್‌ಗಳ ವ್ಯವಸ್ಥೆ ಮಾಡಲಾಗಿದೆ.

ಮಾರ್ಚ್ 10ರಂದು ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ತೆರೆಯಲಾಗುವ ಲಸಿಕಾ ಕೇಂದ್ರಗಳಲ್ಲಿ ಪೋಲಿಯೊ ಹನಿ ನೀಡಲಾಗುತ್ತದೆ. ಗ್ರಾಮಾಂತರ ಪ್ರದೇಶದಲ್ಲಿ 2ನೇ ಹಾಗೂ 3ನೇ ದಿನ ಮನೆಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ. ಪಟ್ಟಣ ಪ್ರದೇಶದಲ್ಲಿ 4ನೇ ದಿನವೂ ಮನೆಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ.

‘ಆಗ ತಾನೇ ಹುಟ್ಟಿದ ಮಗುವಿನಿಂದ 5 ವರ್ಷದವರೆಗಿನ ಎಲ್ಲಾ ಮಕ್ಕಳಿಗೂ ಪೋಷಕರು ಈ ಹಿಂದೆ ಎಷ್ಟೇ ಲಸಿಕೆ ನೀಡಿದ್ದರೂ ಮಾರ್ಚ್ 10ರಂದು ತಪ್ಪದೇ ಲಸಿಕೆ ಹಾಕಿಸಬೇಕು. ಎಲ್ಲ ಪೋಷಕರು, ಚುನಾಯಿತ ಪ್ರತಿನಿಧಿಗಳು, ಧಾರ್ಮಿಕ, ವಿವಿಧ ಸಮುದಾಯದ ಮುಖಂಡರು, ಸ್ವಯಂಸೇವಾ ಸಂಘಸಂಸ್ಥೆಯ ಪದಾಧಿಕಾರಿಗಳು ಜಿಲ್ಲೆಯ ಆಯಾ ವ್ಯಾಪ್ತಿಯ ಪ್ರದೇಶಗಳಲ್ಲಿ ನಡೆಯಲಿರುವ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮನವಿ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !