ಏ. 10ಕ್ಕೆ ಮೈಸೂರಿನಲ್ಲಿ ಮಾಯಾವತಿ ರ‍್ಯಾಲಿ

ಶನಿವಾರ, ಮಾರ್ಚ್ 23, 2019
31 °C

ಏ. 10ಕ್ಕೆ ಮೈಸೂರಿನಲ್ಲಿ ಮಾಯಾವತಿ ರ‍್ಯಾಲಿ

Published:
Updated:
Prajavani

ಚಾಮರಾಜನಗರ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಲಿದ್ದಾರೆ‌.

ಏಪ್ರಿಲ್‌ 10ರಂದು ಮೈಸೂರಿನಲ್ಲಿ ಕಾರ್ಯಕರ್ತರ ಬೃಹತ್‌ ಸಮಾವೇಶ ಹಮ್ಮಿಕೊಂಡಿದ್ದು, ಮಾಯಾವತಿ ಭಾಗವಹಿಸಲಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರಾಜ್ಯದ ದಕ್ಷಿಣ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ನಡೆಯಲಿರುವ ರ‍್ಯಾಲಿಯಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ರ‍್ಯಾಲಿ ನಡೆಸುವ ಸ್ಥಳ ಮತ್ತು ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದರು.

ಬರಹ ಇಷ್ಟವಾಯಿತೆ?

  • 5

    Happy
  • 1

    Amused
  • 0

    Sad
  • 0

    Frustrated
  • 2

    Angry

Comments:

0 comments

Write the first review for this !