ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಗೆ ವಿ.ಆರ್. ಸುಬ್ಬರಾವ್ ಆಯ್ಕೆ

7

ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಗೆ ವಿ.ಆರ್. ಸುಬ್ಬರಾವ್ ಆಯ್ಕೆ

Published:
Updated:
ಸುಬ್ಬರಾವ್‌

ಚಾಮರಾಜನಗರ: 2017ನೇ ಸಾಲಿನ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಗೆ ಗುಂಡ್ಲುಪೇಟೆಯ ಹಿರಿಯ ಪತ್ರಕರ್ತ ವಿ.ಆರ್. ಸುಬ್ಬರಾವ್ ಆಯ್ಕೆಯಾಗಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕ್ರಿಯಾಶೀಲ ಪತ್ರಕರ್ತರಿಗೆ ಸುತ್ತೂರು ಮಠವು 2011ರಲ್ಲಿ ಪ್ರಶಸ್ತಿಯನ್ನು ಸ್ಥಾಪಿಸಿತ್ತು. 23 ವರ್ಷಗಳಿಂದ ಕನ್ನಡ ಪ್ರಭ, ಮತ್ತು ಪ್ರಜಾನುಡಿ ಪತ್ರಿಕೆಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಸುತ್ತೂರು ಮಠವು ಇವರಿಗೆ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಯನ್ನು ನೀಡಲಿದೆ.  ಇದೇ 15ರಂದು ಪ್ರಶಸ್ತಿ ಪ್ರದಾನ ಸಮಾರಂಭ ಚಾಮರಾಜನಗರದ ವರ್ತಕರ ಭವನದಲ್ಲಿ ನಡೆಯಲಿದೆ. 

ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಉದ್ಘಾಟಿಸಲಿದ್ದು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎಂ. ನಂದೀಶ್ ಅಧ್ಯಕ್ಷತೆ ವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ಪ್ರಶಸ್ತಿ ಪ್ರಧಾನ ಮಾಡುವವರು.

ಮುಖ್ಯ ಅತಿಥಿಗಳಾಗಿ ಸಂಸದ ಆರ್. ಧ್ರುವನಾರಾಯಣ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್. ಶಿವಕುಮಾರಸ್ವಾಮಿ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಎಸ್‌ಪಿ ಧರ್ಮೇಂದ್ರಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕೆ. ಹರೀಶ್‌ಕುಮಾರ್, ವರ್ತಕರ ಸಂಘದ ಅಧ್ಯಕ್ಷ ಎಸ್. ಬಾಲಸುಬ್ರಮಣ್ಯ ಭಾಗವಹಿಲಿಸದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ದೇವರಾಜು ಕಪ್ಪಸೋಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !