ಮೇಕೆದಾಟು: ತಮಿಳುನಾಡು ಸರ್ಕಾರದ ವಿರುದ್ಧ ಧರಣಿ

7

ಮೇಕೆದಾಟು: ತಮಿಳುನಾಡು ಸರ್ಕಾರದ ವಿರುದ್ಧ ಧರಣಿ

Published:
Updated:
Deccan Herald

ಚಾಮರಾಜನಗರ: ರಾಜ್ಯ ಸರ್ಕಾರ ಮೇಕೆದಾಟು ಬಳಿ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಚಾಮರಾಜೇಶ್ವರ ಉದ್ಯಾನದ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು, ಅಲ್ಲಿಂದ ಭುವನೇಶ್ವರಿ ವೃತ್ತಕ್ಕೆ ತೆರಳಿ, ಕೆಲಕಾಲ ಪ್ರತಿಭಟನೆ ನಡೆಸಿದರು. ‘ತಮಿಳುನಾಡು ಸರ್ಕಾರಕ್ಕೆ ಧಿಕ್ಕಾರ’ ಎಂದು ಬರೆದಿದ್ದ ಫಲಕವನ್ನು ಸುಟ್ಟು, ನೆರೆರಾಜ್ಯದ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಕೈಗೆತ್ತಿಕೊಂಡಿದೆ. ಇದು ಹಲವು ದಶಕಗಳ ಬೇಡಿಕೆ. ಕೇಂದ್ರ ಸರ್ಕಾರ ಕೂಡ ಸಹಮತ ವ್ಯಕ್ತಪಡಿಸಿದೆ. ಕರ್ನಾಟಕದಲ್ಲಿ ಅಣೆಕಟ್ಟೆ ನಿರ್ಮಿಸಲಾಗುತ್ತಿದ್ದರೂ, ತಮಿಳುನಾಡು ಸರ್ಕಾರ ಅದಕ್ಕೆ ಅಡ್ಡಗಾಲು ಹಾಕುತ್ತಿದೆ. ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದ್ದರೂ ಅದಕ್ಕೆ ಬುದ್ಧಿ ಬಂದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.‌

‘ತಮಿಳುನಾಡು ಸರ್ಕಾರ ಈ ಯೋಜನೆ ವಿರೋಧಿಸುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ’ ಎಂದು ಹೇಳಿದರು.

ಕರ್ನಾಟಕ ಸೇನಾ ಪಡೆಯ ಶಾ.ಮುರಳಿ, ಗು.ಪುರುಷೋತ್ತಮ, ಪಣ್ಯದಹುಂಡಿರಾಜು, ರವಿಚಂದ್ರಪ್ರಸಾದ್, ಚಾ.ಹ.ಶಿವರಾಜ್, ಮಹೇಶ್‌ಗೌಡ, ವೀರಭದ್ರ, ತಾಂಡವಮೂರ್ತಿ, ನಿಜಧ್ವನಿ ಗೋವಿಂದರಾಜು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !