ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ನೆನಪು

Last Updated 24 ಜನವರಿ 2012, 19:30 IST
ಅಕ್ಷರ ಗಾತ್ರ

ರಾಷ್ಟ್ರಕವಿ ಕುವೆಂಪು ಯುವಕರ ಸಂಘ ಮತ್ತು ಕನ್ಯಾಕುಮಾರಿ ಎಜುಕೇಶನ್ ಟ್ರಸ್ಟ್ ವತಿಯಿಂದ ಡಿ.29ರಂದು ಶಾಲೆಯಲ್ಲಿ ಕುವೆಂಪು ಜನ್ಮದಿನಾಚರಣೆಯನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ರಸಪ್ರಶ್ನೆ, ಪ್ರಬಂಧ, ಚಿತ್ರಕಲಾ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಗೆದ್ದ ಮಕ್ಕಳಿಗೆ ಸಾಹಿತಿ ಹಾಗೂ ಉಪನ್ಯಾಸಕ ಡಾ.ಕೆ.ವಿ. ಚಂದ್ರಣ್ಣಗೌಡ ಬಹುಮಾನ ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಚ್.ತುಕಾರಾಂ ಮಾತನಾಡಿ, ಹಲವು ಸಾಹಿತ್ಯ ಪ್ರಕಾರಗಳಲ್ಲಿ ಕುವೆಂಪು ಅವರ ಹೆಸರು ಚಿರವಾಗಿದೆ. ಮನುಜ ಮತ ವಿಶ್ವ ಪಥ ಎಂದು ಸಾರಿದ ಕುವೆಂಪು ಅವರ ಕುರಿತು ತಿಳಿದುಕೊಳ್ಳುವುದು ಸಾಕಷ್ಟಿದೆ ಎಂದರು. ಇದೇ ಸಂದರ್ಭದಲ್ಲಿ ಗಾಯಕ ಸಿ. ಅಶ್ವಥ್ ಅವರನ್ನೂ ಸ್ಮರಿಸಿಕೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT