ಯಲಹಂಕದ ಡೆಲ್ಲಿ ಪಬ್ಲಿಕ್ ಶಾಲೆಯ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳು fueladream.comನಲ್ಲಿ ಕ್ರೌಡ್ಫಂಡಿಂಗ್ ಅಭಿಯಾನ ನಡೆಸುತ್ತಿದ್ದಾರೆ.
ಬಡ ಮಕ್ಕಳ ಹೃದಯ ಶಸ್ತ್ರಚಿಕಿತ್ಸೆಗೆ ಈ ಹಣ ಸಂಗ್ರಹಿಸಲಾಗುವುದು ಈ ಅಭಿಯಾನದ ಉದ್ದೇಶ.
50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ‘60 ದಿನಗಳಲ್ಲಿ ₹ 20 ಲಕ್ಷ ಸಂಗ್ರಹಿಸುವ ಗುರಿಯನ್ನು ಇದು ಹೊಂದಿದ್ದೆವು. 45ದಿನಗಳಲ್ಲಿ ₹ 14 ಲಕ್ಷ ಸಂಗ್ರಹವಾಗಿದೆ ಎನ್ನುತ್ತಾರೆ ವಿದ್ಯಾರ್ಥಿಗಳು.
ರೋಟರಿ ಬೆಂಗಳೂರು ಇಂದಿರಾನಗರ(ಆರ್ಬಿಐ) ಮತ್ತು ನೀಡಿ ಹಾರ್ಟ್ ಫೌಂಡೇಶನ್ ಸಹಯೋಗದಲ್ಲಿ ರೂಪಿಸಲಾಗಿದೆ.
ಶ್ರೀ ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ಬನ್ನೇರುಘಟ್ಟದ ಫೋರ್ಟಿಸ್ ಆಸ್ಪತ್ರೆಯ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆದಿದೆ. ಮಾಹಿತಿಗೆ: 88847 51916.