ಹೀಗೊಂದು ಗುಸುಗುಸು ಬಾಲಿವುಡ್ ಗಲ್ಲಿಯಲ್ಲಿ ಹರಿದಾಡುತ್ತಿದೆ. ಕನ್ನಡ ಸಿನಿರಂಗದಲ್ಲಿ ಜನಪ್ರಿಯರಾಗಿರುವ ಸುದೀಪ್ ಬಾಲಿವುಡ್, ತೆಲುಗು ಸಿನಿಮಾಗಳಲ್ಲಿ ಅಭಿನಯಿಸಿ ಈಗಾಗಲೇ ಹೆಸರು ಮಾಡಿದ್ದಾರೆ. ಹೀಗಾಗಿ ಸುದೀಪ್ ಆರು ವರ್ಷಗಳ ನಂತರ ಬಾಲಿವುಡ್ ಸಿನಿಮಾದಲ್ಲಿ ಅಭಿನಯಿಸುತ್ತಾರೆ ಎನ್ನುವ ಸುದ್ದಿ ಅಭಿಮಾನಿಗಳಲ್ಲಿ ಖುಷಿ ಹೆಚ್ಚಿಸಿದೆ.