‘ಲೈಂಗಿಕ ಅಲ್ಪಸಂಖ್ಯಾತರಿಗೆ ಸೇನೆಯಲ್ಲಿ ಅವಕಾಶ ಇಲ್ಲ’

ಶುಕ್ರವಾರ, ಜೂನ್ 21, 2019
24 °C
ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಕಟ

‘ಲೈಂಗಿಕ ಅಲ್ಪಸಂಖ್ಯಾತರಿಗೆ ಸೇನೆಯಲ್ಲಿ ಅವಕಾಶ ಇಲ್ಲ’

Published:
Updated:

ಲಂಡನ್‌(ಎಎಫ್‌ಪಿ): ಲಿಂಗತ್ವ ಅಲ್ಪಸಂಖ್ಯಾತರು ಹೆಚ್ಚಿನ ಪ್ರಮಾಣದ ಔಷಧಿ ಸೇವನೆ ಮಾಡಬೇಕಾಗಿರುವುದರಿಂದ ಅವರಿಗೆ ಸೇನೆಯಲ್ಲಿ ಕೆಲಸ ಮಾಡುವ ಅವಕಾಶವನ್ನು ನಿರಾಕರಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬುಧವಾರ ಪ್ರಕಟಿಸಿದ್ದಾರೆ. 

ಸೇನೆಯಲ್ಲಿ ಕೆಲಸ ಮಾಡುವಾಗ ಬಳಸುವ ಸೂಚಿತ ಔಷಧಿಗಳ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗಿದೆ ಎಂದು ಅವರು ಬ್ರಿಟನ್‌ನ ಐಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

’ಲೈಂಗಿಕ ಅಲ್ಪಸಂಖ್ಯಾತರು ಹೆಚ್ಚಿನ ಔಷಧಿಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.  ಶಸ್ತ್ರಚಿಕಿತ್ಸೆ ಮಾಡಿಕೊಂಡ ಬಳಿಕ ಅಂತಹ ಔಷಧಿಗಳ ಅಗತ್ಯ ಅವರಿಗೆ ಇರುತ್ತದೆ. ಆದರೆ ಸೇನೆಯಲ್ಲಿ ಕೆಲಸ ಮಾಡುವಾಗ ನಿರ್ದಿಷ್ಟವಾದ ಔಷಧಿಗಳನ್ನು ಮಾತ್ರ ತೆಗೆದುಕೊಳ್ಳುವ ಅವಕಾಶವಿದೆ.ಆದ್ದರಿಂದ ಅವರನ್ನು ಸೇನೆಗೆ ನೇಮಕ ಮಾಡಿಕೊಳ್ಳುವುದನ್ನು ಏಪ್ರಿಲ್‌ನಲ್ಲಿಯೇ ನಿಷೇಧಿಸಲಾಗಿದೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್‌ನಲ್ಲಿಯೂ ಹೋರಾಟ ನಡೆಯಿತು’ ಎಂದು ಅವರು  ಹೇಳಿದ್ದಾರೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !