ಪಡುಬಿದ್ರಿ: ತುಳುನಾಡಿನ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಪಿಲಿಕೋಲವು ಕಾಪುವಿನಲ್ಲಿ ಭಕ್ತಿಭಾವ ಮತ್ತು ಸಂಭ್ರಮದ ನಡುವೆ ಶನಿವಾರ ನೆರವೇರಿತು.

ಎರಡು ವರ್ಷಗಳಿಗೊಮ್ಮೆ ನಡೆಯುವ ಈ ವಿಶಿಷ್ಟ ಆಚರಣೆಯಲ್ಲಿ ಕರಾವಳಿ ಜಿಲ್ಲೆಗಳಲ್ಲದೇ ಮುಂಬೈ, ಬೆಂಗಳೂರು, ಕಾಸರಗೋಡು ಹಾಗೂ ವಿದೇಶಗಳಿಂದಲೂ ಸಾವಿರಾರು ಭಕ್ತರು ಪಾಲ್ಗೊಂಡು ಪಿಲಿಕೋಲ ವೀಕ್ಷಿಸಿದರು.

ಕಾಪುವಿನ ಪಡು ಗ್ರಾಮದ ಶ್ರೀಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ನಡೆದ ಈ ಆಚರಣೆ ತುಳುನಾಡಿನ ಪ್ರಾಚೀನ ದೈವಾರಾಧನಾ ಪರಂಪರೆಯ ಪ್ರತೀಕ. ಪಿಲಿಕೋಲಕ್ಕೂ ಮುನ್ನ ಬಬ್ಬರ್ಯ, ಕೊಡಮಣಿತ್ತಾಯ, ನಂದಿಕೇಶ್ವರ ಸೇರಿದಂತೆ ಪರಿವಾರ ದೈವಗಳ ನೇಮೋತ್ಸವ ನಡೆಯಿತು.

ಮಧ್ಯಾಹ್ನ 2 ಗಂಟೆಗೆ ಆರಂಭಗೊಂಡ ಪಿಲಿಕೋಲವು ಸಂಜೆ 6 ಗಂಟೆಯವರೆಗೂ ನಡೆಯಿತು.

ಪಿಲಿ ಭೂತವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದ ಬಳಿಕ, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿ ನೆಟ್ಟ ಬಂಟ ಕಂಬವನ್ನೇರಿ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಬೇಟೆಗಾಗಿ ಹೊರ ಟಿತು. ಐದು ಗಂಟೆಗಳ ಕಾಲ ಕಾಪು ಮಾರಿಗುಡಿ ಪರಿಸರದಲ್ಲಿ ಸುತ್ತಾಡಿ ಬೇಟೆ ಯಾಡುವ ಸಂಪ್ರದಾಯ ನಡೆಯಿತು.

ಈ ವೇಳೆ ಹುಲಿ ವೇಷಧಾರಿ ಆವೇಶಭರಿತವಾಗಿ ಭಕ್ತರತ್ತ ಧಾವಿಸುತ್ತಿದ್ದಂತೆ ಜನರು ಭಯಭಕ್ತಿಯಿಂದ ಓಡಿಹೋಗಿ ಮತ್ತೆ ದೂರದಲ್ಲಿ ನಿಂತು ವೀಕ್ಷಿಸುತ್ತಿದ್ದ ದೃಶ್ಯ ಕಂಡುಬಂತು. ಸುದೀರ್ಘ ಸಂಚಾರದ ಬಳಿಕ ಪಿಲಿದೈವ ಮಾರಿಯಮ್ಮ ದೇವಿಯ ಸನ್ನಿಧಿಗೆ ಮರಳಿದಾಗ ಪಿಲಿಕೋಲಕ್ಕೆ ತೆರೆ ಬಿದ್ದಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-28-1301665140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.