ಮೈಸೂರು: ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಮೇ 18ರಂದು ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

‘ವಸ್ತುಸಂಗ್ರಹಾಲಯಗಳು ವಿಭಜಿತ ಜಗತ್ತನ್ನು ಒಂದುಗೂಡಿಸುತ್ತವೆ’ ಎಂಬ ಥೀಮ್ನಲ್ಲಿ ಇಲಾಖೆಯಿಂದ ‘ಮ್ಯೂಸಿಯಮ್ಸ್ ಆನ್ ವೀಲ್ಸ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲಾ– ಕಾಲೇಜು ವಿದ್ಯಾರ್ಥಿಗಳು, ಸಂಶೋಧಕರು, ಇತಿಹಾಸ ಆಸಕ್ತರು ಹಾಗೂ ಸಾರ್ವಜನಿಕರಿಗೆ ವಿವಿಧ ಮಾದರಿಯ ವಸ್ತುಸಂಗ್ರಹಾಲಯಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಈ ಕಾರ್ಯಕ್ರಮವನ್ನು 18ರಂದು ಬೆಳಿಗ್ಗೆ 8ಕ್ಕೆ ನಗರದ ಇರ್ವಿನ್ ರಸ್ತೆಯ ವೆಲ್ಲಿಂಗ್ಟನ್ ಸರ್ಕಾರಿ ವಸ್ತುಸಂಗ್ರಹಾಲಯ ಮತ್ತು ಕಲಾ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ‘ಮ್ಯೂಸಿಯಮ್ಸ್ ಆನ್ ವೀಲ್ಸ್’ ವಾಹನವು ಪ್ರಾಕೃತಿಕ ಪ್ರಾದೇಶಿಕ ವಸ್ತುಸಂಗ್ರಹಾಲಯ, ಪಯಣ (ಕಾರ್ ಮ್ಯೂಸಿಯಂ) ಹಾಗೂ ರೈಲ್ವೆ ಮ್ಯೂಸಿಯಂ ಮೂಲಕ ಹಾದು, ವೆಲ್ಲಿಂಗ್ಟನ್ ಸರ್ಕಾರಿ ವಸ್ತುಸಂಗ್ರಹಾಲಯ ಮತ್ತು ಕಲಾ ಗ್ಯಾಲರಿಯಲ್ಲಿ ಮುಕ್ತಾಯಗೊಳ್ಳಲಿದೆ. ಈ ಮೂಲಕ, ವಿವಿಧ ಮಾದರಿಯ ಪ್ರಾಚ್ಯಾವಶೇಷಗಳ ಪ್ರಾಚೀನತೆ ಮತ್ತು ಸಾಹಿತ್ಯ, ಸಾಂಸ್ಕೃತಿಕ ಮಜಲುಗಳನ್ನು ಪರಿಚಯಿಸುವ ಉದ್ದೇಶ ಹೊಂದಲಾಗಿದೆ. 10ರಿಂದ 60 ವರ್ಷದವರು ಭಾಗವಹಿಸಬಹುದು.

ಆಸಕ್ತರು ಮೇ 16ರ ಸಂಜೆ 5.30ರೊಳಗೆ ಹೆಸರು ನೋಂದಾಯಿ ಸಬೇಕು. ಮಾಹಿತಿಗೆ ಮೊ.ಸಂ.0821-2424671, ಕ್ಯೂರೇಟರ್ ಸುನೀಲ್ ಕುಮಾರ್ ಎಂ. (78294 04796) ಅವರನ್ನು ಸಂಪರ್ಕಿಸಬಹುದು ಎಂದು ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತ ಎ.ದೇವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-39-422984706

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.