ಶಾಸಕರ ಆಸ್ತಿ ವಿವರ ಸಲ್ಲಿಕೆಗೆ ಇಂದೇ ಕೊನೆ ದಿನ

7

ಶಾಸಕರ ಆಸ್ತಿ ವಿವರ ಸಲ್ಲಿಕೆಗೆ ಇಂದೇ ಕೊನೆ ದಿನ

Published:
Updated:

ಬೆಂಗಳೂರು : ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಲು ಶನಿವಾರ (ಜೂನ್‌ 30) ಕಡೆಯ ದಿನ.

ಹದಿನೈದನೇ ವಿಧಾನಸಭೆಗೆ ಆಯ್ಕೆಯಾಗಿರುವ ಸದಸ್ಯರು 2017-18ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವದ ಪಟ್ಟಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕಾಗಿದೆ.

ಲೋಕಾಯುಕ್ತಕ್ಕೆ ಸಲ್ಲಿಸಿದ ಆಸ್ತಿ ವಿವರ ಪ್ರಮಾಣ ಪತ್ರದ ಮಾಹಿತಿಯನ್ನು ವಿಧಾನಸಭೆ ಸಚಿವಾಲಯಕ್ಕೆ ತಿಳಿಸಲು ಪ್ರಕಟಣೆ ತಿಳಿಸಿದೆ.
ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಪ್ರತಿ ವರ್ಷ ತಮ್ಮ ಮತ್ತು ತಮ್ಮ ಕುಟುಂಬದ ಸದಸ್ಯರುಗಳ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕಾಗಿದೆ.

ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984ರ ಕಲಂ 7ರ ಉಪಕಲಂ (1)ರಡಿ ಆಯಾ ವರ್ಷದ ಜೂನ್ 30ರೊಳಗೆ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸ ಬೇಕಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !