ಮಹದೇಶ್ವರ ಬೆಟ್ಟ: ವಿಜೃಂಭಣೆಯ ರಥೋತ್ಸವ

ಭಾನುವಾರ, ಏಪ್ರಿಲ್ 21, 2019
26 °C

ಮಹದೇಶ್ವರ ಬೆಟ್ಟ: ವಿಜೃಂಭಣೆಯ ರಥೋತ್ಸವ

Published:
Updated:
Prajavani

ಮಹದೇಶ್ವರ ಬೆಟ್ಟ: ಯುಗಾದಿ ಜಾತ್ರೆಯ ಪ್ರಯುಕ್ತ ಇಲ್ಲಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಸ್ವಾಮಿಯ ರಥೋತ್ಸವ ಶನಿವಾರ ವೈಭವದಿಂದ ನೆರವೇರಿತು. 

ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತ ಸಮೂಹ ರಥಕ್ಕೆ ಹಣ್ಣು, ಜವನ ಎಸೆದು ಕೃತಾರ್ಥರಾದರು.

ಶನಿವಾರ ಬೆಳಿಗ್ಗೆ 8.30ರ ಸಮಯದಲ್ಲಿ ಬೇಡಗಂಪಣ ಸಮುದಾಯದ ಪುಟ್ಟ ಪುಟ್ಟ ಹೆಣ್ಣು ಮಕ್ಕಳ ಬೆಲ್ಲದ ಆರತಿಯೊಂದಿಗೆ ಸಾಲೂರು ಮಠದ ಮಠಾಧ್ಯಕ್ಷರಾದ ಗುರು ಸ್ವಾಮಿಗಳ ನೇತೃತ್ವದಲ್ಲಿ ಬೇಡಗಂಪಣ ವಿಧಿವಿಧಾನಗಳಲ್ಲಿ ಪೂಜಾ ಕೈಂಕರ್ಯಗಳೊಂದಿಗೆ ಶ್ರೀಸ್ವಾಮಿಯ ಮಹಾ ರಥೋತ್ಸವ ನೆರವೇರಿತು.

ಜಾತ್ರೆಯ ಅಂಗವಾಗಿ ದೇವಾಲಯಕ್ಕೆ ರಾಜ್ಯವಲ್ಲದೆ,  ನೆರೆ ರಾಜ್ಯವಾದ ತಮಿಳುನಾಡಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು.

ಭಕ್ತರ ಅನುಕೂಲಕ್ಕಾಗಿ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ನಿತ್ಯ ದಾಸೋಹದ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆಯನ್ನು ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಾಡಲಾಗಿತ್ತು.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !