ಕಡೇ ಸೋಮವಾರ: ಮಹದೇಶ್ವರ ಸ್ವಾಮಿ ತೆಪ್ಪೋತ್ಸವ

7
ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ, ದೇವರ ದರ್ಶನ ಪಡೆದ ಸಾವಿರಾರು ಭಕ್ತರು

ಕಡೇ ಸೋಮವಾರ: ಮಹದೇಶ್ವರ ಸ್ವಾಮಿ ತೆಪ್ಪೋತ್ಸವ

Published:
Updated:
Deccan Herald

ಮಹದೇಶ್ವರ ಬೆಟ್ಟ: ಕಡೇ ಕಾರ್ತೀಕ ಸೋಮವಾರದ ಪ್ರಯುಕ್ತ ಮಲೆ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆದವು. ವಿವಿಧ ಕಡೆಗಳಿಂದ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು.

ಸ್ವಾಮಿಗೆ ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯ ನಡೆಯಿತು. ಬಳಿಕ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಹರಕೆ ಹೊತ್ತಿದ್ದ ಭಕ್ತರು ವಿವಿಧ ಕಾಣಿಕೆ ಅರ್ಪಿಸಿ ಹರಕೆ ತೀರಿಸಿದರು. ಸಂಜೆ ಚಿನ್ನದ ರಥೋತ್ಸವ ನಡೆಯಿತು. ಇದನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡರು.

ನ.12ರಿಂದ ಕಾರ್ತೀಕ ಸೋಮವಾರದ ಪ್ರಯುಕ್ತ ವಿಶೇಷ ಪೂಜೆಗಳು ನಡೆದಿದ್ದವು. ಸೋಮವಾರ ದೀಪದಗಿರಿ ಒಡ್ಡುವಿನಲ್ಲಿ ಮಹದೇಶ್ವರ ಸ್ವಾಮಿಗೆ ಮಹಾಜ್ಯೋತಿ ಬೆಳಗಿಸಲಾಯಿತು. ಸ್ವಾಮಿಯ ತೆಪ್ಪೋತ್ಸವ ನಡೆದ ಬಳಿಕ ಜಾತ್ರಾ ಮಹೋತ್ಸವ ಮುಕ್ತಾಯಗೊಂಡಿತು.

ದೇವಾಲಯಕ್ಕೆ ಬಂದಿದ್ದ ಭಕ್ತರಿಗೆ ಪ್ರಾಧಿಕಾರದ ವತಿಯಿಂದ ಅನ್ನದಾಸೋಹ, ಕುಡಿಯುವ ನೀರು ಹಾಗೂ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !