ಶಿಖಂಡಿ ರಾಜಕಾರಣ: ಸುರೇಶ್‌ಗೌಡ

ಶುಕ್ರವಾರ, ಮೇ 24, 2019
22 °C

ಶಿಖಂಡಿ ರಾಜಕಾರಣ: ಸುರೇಶ್‌ಗೌಡ

Published:
Updated:

ಮಂಡ್ಯ: ‘ಕೆಲವರು ಹೆಂಗಸರನ್ನು ಮುಂದಿಟ್ಟುಕೊಂಡು ಶಿಖಂಡಿ ರಾಜಕಾರಣ ಮಾಡಿದ್ದಾರೆ. ಮೈತ್ರಿ ಅಭ್ಯರ್ಥಿ ಕೆ.ನಿಖಿಲ್‌ ವಿರುದ್ಧ ಕೆಲಸ ಮಾಡಿದ್ದಾರೆ’ ಎಂದು ನಾಗಮಂಗಲದಲ್ಲಿ ಶಾಸಕ ಸುರೇಶ್‌ಗೌಡ ವಾಗ್ದಾಳಿ ನಡೆಸಿದರು.

‘ಮೂಲ ಕಾಂಗ್ರೆಸ್ಸಿಗರು ಮೈತ್ರಿಧರ್ಮ ಪಾಲನೆ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ಗೆ ವಲಸೆ ಹೋದ ಮುಖಂಡರು ಆ ಪಕ್ಷದ ಸಿದ್ಧಾಂತ ಅರಿಯದೇ ಬ್ಲಾಕ್‌ಮೇಲ್‌ ರಾಜಕಾರಣ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ಬಹಿರಂಗವಾಗಿಯೇ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದಾರೆ. ಇವರು ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷ ನಿರ್ನಾಮ ಮಾಡಿ ಬಿಜೆಪಿ ಹುಟ್ಟಿಗೆ ಕಾರಣಕರ್ತರಾಗುತ್ತಿದ್ದಾರೆ’ ಎಂದರು.

ಇದನ್ನೂ ಓದಿ: ಸುಮಲತಾ ಜೊತೆ ಊಟ ಮಾಡುವುದು ತಪ್ಪಾ: ಚಲುವರಾಯಸ್ವಾಮಿ

ಚಲುವರಾಯಸ್ವಾಮಿ– ಸುಮಲತಾ ಭೇಟಿಯ ವಿಡಿಯೊ ಕುರಿತು ಮಾತನಾಡಿದ ಅವರು ‘ಅವನ್ಯಾವ ದೊಡ್ಡ ವ್ಯಕ್ತಿ ಎಂದು ಆತನ ವಿರುದ್ಧ ಗೂಢಾಚಾರಿಕೆ ಮಾಡಲು ಹೋಗುತ್ತಾರೆ. ಇಲ್ಲಸಲ್ಲದ ಆರೋಪ ಮಾಡುವುದನ್ನು ಬಿಟ್ಟು ಬೇರೆ ಕೆಲಸ ನೋಡಿಕೊಳ್ಳಲಿ’ ಎಂದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !