ಮೊಬೈಲ್ ಕೊಡದಿದ್ದಕ್ಕೆ ಕೊಲೆ: ‘ಮ್ಯಾಟ್ರು’ ವಶಕ್ಕೆ

ಸೋಮವಾರ, ಜೂನ್ 24, 2019
26 °C

ಮೊಬೈಲ್ ಕೊಡದಿದ್ದಕ್ಕೆ ಕೊಲೆ: ‘ಮ್ಯಾಟ್ರು’ ವಶಕ್ಕೆ

Published:
Updated:

ಬೆಂಗಳೂರು: ಹಲಸೂರು ಗೇಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಶಿವನಾಯ್ಕ ಎಂಬುವರ ಕೊಲೆ ಪ್ರಕರಣ ಸಂಬಂಧ, ಸೈಯದ್ ಸೈಫ್ ಅಲಿಯಾಸ್ ಮ್ಯಾಟ್ರು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಟ್ರ್ಯಾಕ್ಟರ್ ಚಾಲಕರಾಗಿದ್ದ ಶಿವನಾಯ್ಕ ಅವರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳ ತಂಡ, ಚಾಕು ತೋರಿಸಿ ಮೊಬೈಲ್‌ ನೀಡುವಂತೆ ಬೇಡಿಕೆ ಇಟ್ಟಿತ್ತು. ಮೊಬೈಲ್ ಕೊಡಲು ಒಪ್ಪದಿದ್ದಾಗ, ದುಷ್ಕರ್ಮಿಯೊಬ್ಬ ಚಾಲಕನ ಎದೆಗೆ ಚಾಕುವಿನಿಂದ ಇರಿದಿದ್ದ. ನಂತರ, ದುಷ್ಕರ್ಮಿಗಳೆಲ್ಲರೂ ಪರಾರಿಯಾಗಿದ್ದರು’ ಎಂದು ಪೊಲೀಸರು ಹೇಳಿದರು.

‘ತೀವ್ರ ಗಾಯಗೊಂಡಿದ್ದ ಶಿವನಾಯ್ಕ ಅವರನ್ನು ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದರು. ಕೊಲೆ ಪ್ರಕರಣದಲ್ಲಿ ಮ್ಯಾಟ್ರು ಕೈವಾಡವಿರುವ ಶಂಕೆ ಇದೆ. ಹೀಗಾಗಿ, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !