ಮೋದಿ ಅಲ್ಪಸಂಖ್ಯಾತರ ವಿರೋಧಿ: ಸಯ್ಯದ್ ಮೊಯಿನ್‌ ಅಲ್ತಾಫ್‌

7
ರಾಜ್ಯ ಸಮ್ಮಿಶ್ರ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ

ಮೋದಿ ಅಲ್ಪಸಂಖ್ಯಾತರ ವಿರೋಧಿ: ಸಯ್ಯದ್ ಮೊಯಿನ್‌ ಅಲ್ತಾಫ್‌

Published:
Updated:

ವಿಜಯಪುರ: ‘ಪ್ರಧಾನಿ ಮೋದಿ ಅಲ್ಪಸಂಖ್ಯಾತರ ವಿರೋಧಿ’ ಎಂದು ರಾಜ್ಯ ಸಮ್ಮಿಶ್ರ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಸಯ್ಯದ್ ಮೊಯಿನ್‌ ಅಲ್ತಾಫ್‌ ದೂರಿದರು.

‘ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ದೇಶದ ಅಲ್ಪಸಂಖ್ಯಾತರಿಗಾಗಿ ಕೇವಲ ₹ 4000 ಕೋಟಿ ಅನುದಾನ ನೀಡಿದ್ದರೆ, ರಾಜ್ಯ ಸರ್ಕಾರ ₹ 2.500 ಕೋಟಿ ಅನುದಾನ ಒದಗಿಸಿದೆ’ ಎಂದು ಶನಿವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಬೀದರ್‌, ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅಲ್ಪಸಂಖ್ಯಾತರಿಗೆ ಅವಕಾಶ ಕೊಡಬೇಕು ಎಂದು ಪಕ್ಷದ ವರಿಷ್ಠರಲ್ಲಿ ಈಗಾಗಲೇ ಮನವಿ ಮಾಡಿಕೊಂಡಿದ್ದೇವೆ’ ಎಂದು ಇದೇ ಸಂದರ್ಭ ಅಲ್ತಾಫ್‌ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !