ಕುಲಾಂತರಿ ಆಹಾರ ನಿಷೇಧಿಸಲು ಆಗ್ರಹ

7

ಕುಲಾಂತರಿ ಆಹಾರ ನಿಷೇಧಿಸಲು ಆಗ್ರಹ

Published:
Updated:
Deccan Herald

ಬೆಂಗಳೂರು: ಸುಪ್ರೀಂ ಕೋರ್ಟ್‌ ಆದೇಶದಂತೆ ಕುಲಾಂತರಿ ಆಹಾರ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಸುರಕ್ಷಿತ ಆಹಾರ ನಾಗರಿಕರ ಒಕ್ಕೂಟದ ಸದಸ್ಯರು ಸೋಮವಾರ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಕಚೇರಿಯ ಮುಂಭಾಗ ಪ್ರತಿಭಟನೆ ಮಾಡಿದರು.

‘2006ರಲ್ಲಿಯೇ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಜಾರಿಗೆ ತರಲಾಗಿದೆ. ಅಸುರಕ್ಷಿತವಾದ ಕುಲಾಂತರಿ ಆಹಾರ ಉತ್ಪನ್ನಗಳ ಮಾರಾಟವನ್ನು ಸುಪ್ರೀಂಕೋರ್ಟ್‌ ನಿಷೇಧಿಸಿದೆ. ಹೀಗಿದ್ದರೂ ಕುಲಾಂತರಿ ಆಹಾರ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ. ಎಫ್‌ಎಸ್‌ಎಸ್‌ಎಐ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಅಕ್ರೋಶ ವ್ಯಕ್ತಪಡಿಸಿದರು.

ದೇಹಕ್ಕಾಗುವ ಪರಿಣಾಮ: ‘ಹಲವು ವೈಜ್ಞಾನಿಕ ಅಧ್ಯಯನಗಳ ಪ್ರಕಾರ ಕುಲಾಂತರಿ ಪದಾರ್ಥ ಸೇವಿಸಿದವರು ಅಲರ್ಜಿ, ಕ್ಯಾನ್ಸರ್‌ನಂತಹ ಸಮಸ್ಯೆಗಳಿಗೆ ತುತ್ತಾಗಲಿದ್ದಾರೆ’ ಎಂದು ಹೇಳಿದರು.

ಒಕ್ಕೂಟದ ಸದ‌ಸ್ಯೆ ಕವಿತಾ ಕುರುಗಂಟಿ, ‘ಸೆಂಟರ್ ಫಾರ್ ಸೈನ್ಸ್ ಮತ್ತು ಎನ್ವಿರಾನ್‌ಮೆಂಟ್ ನಡೆಸಿದ ಸಂಶೋಧನೆಯಲ್ಲಿ ಮಾರುಕಟ್ಟೆಯಲ್ಲಿ ಶೇ 32 ಕುಲಾಂತರಿ ಆಹಾರ ಪದಾರ್ಥಗಳಿವೆ. ಈ ಹಾವಳಿಗೆ ತಕ್ಷಣ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !