ಸೋಮವಾರ, ನವೆಂಬರ್ 18, 2019
20 °C

ಹ್ಯೂಸ್ಟನ್‌ ಸಮಾವೇಶ: 50 ಸಾವಿರ ಜನರ ನೋಂದಣಿ

Published:
Updated:

ವಾಷಿಂಗ್ಟನ್‌: ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳಲ್ಲಿ 50 ಸಾವಿರಕ್ಕೂ ಹೆಚ್ಚು ಭಾರತೀಯ ಅಮೆರಿಕನ್‌ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಮಹತ್ವದ ಸಮಾವೇಶವಾಗಲಿದೆ ಎಂದು ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತಿಳಿಸಿದ್ದಾರೆ.

ಇದೇ 22 ರಂದು ಹ್ಯೂಸ್ಟನ್‌ ಎನ್‌ಆರ್‌ಜಿ ಕ್ರೀಡಾಂಗಣದಲ್ಲಿ ಈ ಬೃಹತ್‌ ಸಮಾವೇಶ ನಡೆಯಲಿದೆ ಎಂದು ರಾಯಭಾರಿ ಹರ್ಷವರ್ಧನ್‌ ಶ್ರಿಂಗ್ಲಾ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಈ ಸಮಾವೇಶದಲ್ಲಿ ಭಾಗವಹಿಸಲು ಇಲ್ಲಿಯವರೆಗೆ 50 ಸಾವಿರಕ್ಕೂ ಹೆಚ್ಚಿನ ಭಾರತೀಯ ಅಮೆರಿಕನ್ನರು ಹೆಸರು ನೋಂದಾಯಿಸಿದ್ದಾರೆ.

 

ಪ್ರತಿಕ್ರಿಯಿಸಿ (+)