ಭಾನುವಾರ, ಆಗಸ್ಟ್ 25, 2019
28 °C

ಜಿಲ್ಲಾಧಿಕಾರಿ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್: ಬಚ್ಚೇಗೌಡ

Published:
Updated:

ಚಿಕ್ಕಬಳ್ಳಾಪುರ: ‘ಅನಿರುದ್ಧ್ ಶ್ರವಣ್ ಅವರು ಜಿಲ್ಲಾಧಿಕಾರಿಯಾಗಿ ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರ ವರ್ಗಾವಣೆ ಹಿಂದೆ ಕಾಣದ ಕೈಗಳು ಇರಬಹುದು. ಅವರನ್ನು ಇಲ್ಲೇ ಮುಂದುವರಿಸಬೇಕು ಎನ್ನುವುದು ನನ್ನ ಒತ್ತಾಯ. ಈ ಬಗ್ಗೆ ಮುಖ್ಯಮಂತ್ರಿ ಜತೆ ಮಾತನಾಡಿ ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುವೆ’ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ 10 ವರ್ಷಗಳಲ್ಲಿ ಜಿಲ್ಲೆ 8 ವರ್ಷ ಬರಗಾಲಕ್ಕೆ ತುತ್ತಾಗಿದೆ. ಹೀಗಾಗಿ ಶೀಘ್ರದಲ್ಲಿಯೇ ಎಲ್ಲ ಶಾಸಕರೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಪರಿಹಾರಕ್ಕೆ ಮನವಿ ಮಾಡುತ್ತೇವೆ. ಬರ ನಿಭಾಯಿಸಲು ಕ್ರಮಕೈಗೊಳ್ಳುತ್ತೇವೆ. ಭದ್ರಾ ನದಿ ನೀರನ್ನು ನಮ್ಮ ಭಾಗಕ್ಕೆ ಪಡೆಯುವ ಚಿಂತನೆ ನಡೆಸಿದ್ದೇವೆ. ಮಳೆ ಹಾನಿಯಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ₹10 ಸಾವಿರ ಕೋಟಿ ಬಿಡುಗಡೆ ಮಾಡಬೇಕು. ಅದರ ನಾಲ್ಕು ಪಟ್ಟು ಹಣ ಕೊಟ್ಟರೂ ಸಾಕಾಗದು’ ಎಂದು ತಿಳಿಸಿದರು.

Post Comments (+)