ಸೋಮವಾರ, ಮಾರ್ಚ್ 8, 2021
27 °C

ಮ್ಯಾನ್ಮಾರ್‌ ಭೂ ಕುಸಿತದಲ್ಲಿ 50ಕ್ಕೂ ಹೆಚ್ಚು ಸಾವು?

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಯಾಂಗೂನ್‌ : ಉತ್ತರ ಮ್ಯಾನ್ಮಾರ್‌ ಹವಳ ಗಣಿ ಪ್ರದೇಶದಲ್ಲಿ ಭೂ ಕುಸಿತ ಸಂಭವಿಸಿದ್ದು, 50 ಕ್ಕೂ ಹೆಚ್ಚು ಮಂದಿ ಮೃತರಾಗಿರುವ ಶಂಕೆ ವ್ಯಕ್ತವಾಗಿದೆ. 

ಕಾರ್ಮಿಕರು ಮಲಗಿದ್ದ ವೇಳೆ ಈ ಘಟನೆ ಸಂಭವಿಸಿದೆ. 40 ವಾಹನಗಳು ಮಣ್ಣಿನಲ್ಲಿ ಹೂತು ಹೋಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾಚ್ಚಿನ್‌ನಲ್ಲಿ ಈ ದುರಂತ ಸಂಭವಿಸಿದ್ದು, 54 ಮಂದಿ ಕಾಣೆಯಾಗಿದ್ದಾರೆ. ನಾಪತ್ತೆ ಆಗಿರುವವರ ಪೈಕಿ ಯಾರೊಬ್ಬರೂ ಬದುಕಿರುವ ಸಂಭವ ಕಡಿಮೆ ಎನ್ನಲಾಗಿದೆ. ಎರಡು ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. 

ಮ್ಯಾನ್ಮಾರ್ ಥುರಾ ಗೇಮ್ಸ್ ಮತ್ತು ಶ್ವೆ ನಗರ್ ಕೋಯಿ ಕಾಂಗ್ ಕಂಪನಿ ಈ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುತ್ತಿತ್ತು. 

ಇತ್ತೀಚಿನ ದಿನಗಳಲ್ಲಿ ನಡೆದ ಭೀಕರ ದುರಂತ ಇದಾಗಿದೆ. 2015ರಲ್ಲಿ ಸಂಭವಿಸಿದ್ದ ಭೂ ಕುಸಿತದಲ್ಲಿ 100 ಮಂದಿ ಮೃತಪಟ್ಟಿದ್ದರು. 

ಗಣಿ ಕಾರ್ಮಿಕರ ಸುರಕ್ಷತೆಗಾಗಿ ರೂಪಿಸಲಾಗಿರುವ ಮುಂಜಾಗ್ರತಾ ಕ್ರಮಗಳನ್ನು ಕಂಪನಿಗಳು ಪಾಲಿಸುತ್ತಿಲ್ಲ. ಅಲ್ಲದೆ,ಗಣಿಗಾರಿಕೆ ಪ್ರದೇಶಗಳಲ್ಲಿ ಭೂ ಕುಸಿತ ಹೆಚ್ಚುತ್ತಿರುವುದರಿಂದ ಕಾರ್ಮಿಕರು ಸಾವಿಗೀಡಾಗುತ್ತಿದ್ದಾರೆ. ಮ್ಯಾನ್ಮಾರ್‌ ನೆರೆ ರಾಷ್ಟ್ರ ಚೀನಾದಲ್ಲಿ ಹವಳಗಳಿಗೆ ಹೆಚ್ಚಿನ ಬೇಡಿಕೆಯಿರುವ ಕಾರಣ ಇಲ್ಲಿ ಹವಳ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು