ನಾಗರಾಜಮೂರ್ತಿಗೆ ಮುದ್ರಾಡಿ ನಾಟ್ಕ ಸಂಮಾನ

ಮಂಗಳವಾರ, ಮಾರ್ಚ್ 26, 2019
29 °C
ಪತ್ರಕರ್ತರ ಸಹಕಾರ ಸಂಘದ 70ನೇ ವಾರ್ಷಿಕ ಸಂಭ್ರಮದ ಅಂಗವಾಗಿ ವಿಚಾರಗೋಷ್ಠಿ

ನಾಗರಾಜಮೂರ್ತಿಗೆ ಮುದ್ರಾಡಿ ನಾಟ್ಕ ಸಂಮಾನ

Published:
Updated:
Prajavani

ಹೆಬ್ರಿ (ಉಡುಪಿ ಜಿಲ್ಲೆ): ಮುದ್ರಾಡಿ ನಮ ತುಳುವೆರ್ ಕಲಾ ಸಂಘಟನೆ - ನಾಟ್ಕ ಮುದ್ರಾಡಿ ವತಿಯಿಂದ ನೀಡುವ ‘ಮುದ್ರಾಡಿ ನಾಟ್ಕ ಸಂಮಾನ -2019’ ರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ನಟ, ಸಂಘಟಕ ಬೆಂಗಳೂರಿನ ಕೆ.ವಿ.ನಾಗರಾಜಮೂರ್ತಿ ಅವರು ಆಯ್ಕೆಯಾಗಿದ್ದು, ಬುಧವಾರ ಇಲ್ಲಿ ನಡೆಯುವ ಮುದ್ರಾಡಿ ರಾಷ್ಟ್ರೀಯ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

‘ಮುದ್ರಾಡಿ ನಮ ತುಳುವೆರ್ ಕಲಾ ಸಂಘಟನೆ ಬೆಳ್ಳಿಹಬ್ಬದ ಸವಿನೆನಪಿಗಾಗಿ 2010 ರಿಂದ ಉಡುಪಿ ಜಿಲ್ಲೆಯಲ್ಲಿ ಪ್ರಥಮವಾಗಿ ಬಹುಭಾಷಾ ರಾಷ್ಟ್ರೀಯ ನಾಟಕೋತ್ಸವವನ್ನು ನಡೆಸುತ್ತ, ರಂಗಭೂಮಿಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವವರಿಗೆ ‘ಮುದ್ರಾಡಿ ನಾಟ್ಕ ಸಂಮಾನ’ ರಾಷ್ಟ್ರೀಯ ಪ್ರಶಸ್ತಿಯನ್ನು ₹25 ಸಾವಿರ ನಗದಿನೊಂದಿಗೆ ನೀಡಿ ಅಭಿನಂದಿಸುತ್ತಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಸುಕುಮಾರ್ ಮೋಹನ್ ತಿಳಿಸಿದ್ದಾರೆ.

ಕೆ.ವಿ.ನಾಗರಾಜಮೂರ್ತಿ ಅವರು 40 ವರ್ಷಗಳಿಂದ ರಂಗಭೂಮಿಯಲ್ಲಿ ನಾಟಕಕಾರರಾಗಿ, ನಟರಾಗಿ, ಸಂಘಟಕ
ರಾಗಿ ವಿಶೇಷವಾಗಿ ಕಾಲೇಜು ರಂಗಭೂಮಿಯಲ್ಲಿ ಅಪಾರಸೇವೆ ಸಲ್ಲಿಸಿದ್ದು, ಅನೇಕ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಉತ್ಸವಗಳ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ. 

ಮೆರವಣಿಗೆ: ರಾಷ್ಟ್ರೀಯ ರಂಗೋತ್ಸವದ ಸಮಾರೋಪ ಪ್ರಯುಕ್ತ ಮುದ್ರಾಡಿ ಗಣಪತಿ ದೇವಸ್ಥಾನದಿಂದ ನಾಟ್ಕದೂರಿನವರೆಗೆ ನಾಡಿನ ವಿವಿಧ ಜನಪದ ಕಲಾ ತಂಡಗಳ ಆಕರ್ಷಕ ಮೆರವಣಿಗೆ ನಡೆಯಲಿದೆ. ಕುವೆಂಪು ವಿರಚಿತ ‘ಶ್ರೀ ರಾಮಾಯಣ ದರ್ಶನಂ’
ನಾಟಕದ ಪ್ರದರ್ಶನವೂ ಇರಲಿದೆ. 

ನಾಟ್ಕದೂರಿಗೆ ಇಂದು ಶಿವಪ್ರಕಾಶ್

ಕವಿ, ನಾಟಕಕಾರರಾದ ನವದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಎಚ್.ಎಸ್. ಶಿವಪ್ರಕಾಶ್ ಅವರು ಬುಧವಾರ ನಡೆಯಲಿರುವ ಮುದ್ರಾಡಿ ರಾಷ್ಟ್ರೀಯ ರಂಗೋತ್ಸವದ ಸಮಾರೋಪದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಸುಕುಮಾರ್ ಮೋಹನ್ ತಿಳಿಸಿದ್ದಾರೆ.

ಮುದ್ರಾಡಿ ನಾಟ್ಕದೂರು ನಮ‌ ತುಳುವೆರ್ ಕಲಾ ಸಂಘಟನೆಯ ವತಿಯಿಂದ ನಡೆಯುತ್ತಿರುವ 9ನೇ ವರ್ಷದ ಮುದ್ರಾಡಿ ರಾಷ್ಟ್ರೀಯ ರಂಗೋತ್ಸವದ ಸಮಾರೋಪ ಭಾಷಣ ಮತ್ತು ಮುದ್ರಾಡಿ ನಾಟ್ಕ ಸಂಮಾನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡುವರು ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !