ಎರಡನೇ ಆರು ಬೋಗಿಗಳ ಮೆಟ್ರೊಗೆ ಮುಖ್ಯಮಂತ್ರಿ ಚಾಲನೆ

7

ಎರಡನೇ ಆರು ಬೋಗಿಗಳ ಮೆಟ್ರೊಗೆ ಮುಖ್ಯಮಂತ್ರಿ ಚಾಲನೆ

Published:
Updated:

ಬೆಂಗಳೂರು: ನಮ್ಮ ಮೆಟ್ರೊ ಎರಡನೇ ಆರು ಬೋಗಿಗಳ ರೈಲಿನ ಸೇವೆಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಗುರುವಾರ ಆರಂಭಿಸಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೂತನ ಆರು ಬೋಗಿಗಳ ರೈಲಿಗೆ ಚಾಲನೆ ನೀಡಿದರು.

ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೊ ನಿಲ್ದಾಣದಿಂದ ಹೊಸ ರೈಲು ಬೆಳಿಗ್ಗೆ 11ಗಂಟೆ 44 ನಿಮಿಷಕ್ಕೆ ಬೈಯಪ್ಪನಹಳ್ಳಿ ಕಡೆಗೆ ಪ್ರಯಾಣ ಬೆಳೆಸಿತು. ಇದೇ ವೇಳೆ ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಿಂದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಮತ್ತು ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಸಂಪರ್ಕಿಸಲು ಆರಂಭಿಸಿರುವ ನೂತನ ಪಾದಚಾರಿ ಮಾರ್ಗವನ್ನು ಮುಖ್ಯಮಂತ್ರಿ ಉದ್ಘಾಟಿಸಿದರು.

ಮೆಟ್ರೊ ಮುಖ್ಯಮಂತ್ರಿ ಪ್ರಯಾಣ
‌ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿಯವರು ಮೆಜೆಸ್ಟಿಕ್‌ (ನಾಡಪ್ರಭು ಕೆಂಪೇಗೌಡ) ನಿಲ್ದಾಣದಿಂದ ನಾಗಸಂದ್ರದವರೆಗೆ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದರು.

ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಮೇಯರ್ ಗಂಗಾಂಬಿಕೆ, ಶಾಸಕ ದಿನೇಶ್ ಗುಂಡೂರಾವ್, ಉಪ ಮೇಯರ್ ರಮಿಳಾ ಉಮಾಶಂಕರ್ ಇದ್ದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !