ನಂದಾ ಪಾಟೀಲಗೆ ಗೌರವ ಡಾಕ್ಟರೇಟ್

7

ನಂದಾ ಪಾಟೀಲಗೆ ಗೌರವ ಡಾಕ್ಟರೇಟ್

Published:
Updated:
Prajavani

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 10ನೇ ಘಟಿಕೋತ್ಸವ ಫೆ.13ರಂದು ನಡೆಯಲಿದ್ದು, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ನಂದಾ ಪಾಟೀಲರ ಸಂಗೀತ ಕ್ಷೇತ್ರದ ಸೇವೆ ಪರಿಗಣಿಸಿ, ಗೌರವ ಡಾಕ್ಟರೇಟ್‌ ನೀಡಲಾಗುವುದು ಎಂದು ವಿ.ವಿ.ಯ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ತಿಳಿಸಿದರು.

‘ತಜ್ಞರ ಸಮಿತಿ ಗೌರವ ಡಾಕ್ಟರೇಟ್‌ಗಾಗಿ ಮೂವರ ಹೆಸರು ಶಿಫಾರಸು ಮಾಡಿತ್ತು. ರಾಜ್ಯಪಾಲರು ಒಂದೇ ಹೆಸರಿಗೆ ಅನುಮೋದನೆ ನೀಡಿದ್ದರಿಂದ, ನಂದಾ ಪಾಟೀಲ ಒಬ್ಬರಿಗೆ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ನೀಡಲಾಗುತ್ತಿದೆ’ ಎಂದು ಸೋಮವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಕುಲಪತಿ ಉತ್ತರಿಸಿದರು.

ಬೆಂಗಳೂರಿನ ಎಚ್.ಎ.ಎಲ್. ಮ್ಯಾನೇಜ್‌ಮೆಂಟ್‌ ಅಕಾಡೆಮಿಯ ಜನರಲ್ ಮ್ಯಾನೇಜರ್ ನೇಮಿಚಂದ್ರ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಈ ಘಟಿಕೋತ್ಸವದಲ್ಲಿ ಸ್ನಾತಕ, ಸ್ನಾತಕೋತ್ತರ ಮತ್ತು ಪಿಜಿ ಡಿಪ್ಲೊಮಾ ಸೇರಿ, ಒಟ್ಟು 10,873 ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿದ್ದಾರೆ. 46 ವಿದ್ಯಾರ್ಥಿನಿಯರಿಗೆ ಪಿಎಚ್.ಡಿ, 10 ವಿದ್ಯಾರ್ಥಿನಿಯರಿಗೆ ಎಂ.ಫಿಲ್. ಪದವಿ, 56 ವಿದ್ಯಾರ್ಥಿನಿಯರಿಗೆ 67 ಚಿನ್ನದ ಪದಕ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !