ಶಿಕ್ಷಣ ಸಂಸ್ಥೆ ಅಧ್ಯಕ್ಷನ ವಿರುದ್ಧ ಮತ್ತೊಂದು ಎಫ್‌ಐಆರ್‌

ಬುಧವಾರ, ಮಾರ್ಚ್ 20, 2019
31 °C

ಶಿಕ್ಷಣ ಸಂಸ್ಥೆ ಅಧ್ಯಕ್ಷನ ವಿರುದ್ಧ ಮತ್ತೊಂದು ಎಫ್‌ಐಆರ್‌

Published:
Updated:
Prajavani

ಬೆಂಗಳೂರು: ಸರ್ಕಾರಿ ಕೆಲಸದ ಆಮಿಷವೊಡ್ಡಿ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಪಡೆದುಕೊಂಡು ವಂಚಿಸಿದ್ದ ಆರೋಪದಡಿ ಸಿಸಿಬಿ ಪೊಲೀಸರು ಬಂಧಿಸಿರುವ ಗದಗ ಜಿಲ್ಲೆಯ ನರಗುಂದದ ‘ಶ್ರೀ ಸಿದ್ಧಲಿಂಗೇಶ್ವರ ಶಿಕ್ಷಣ ಸಂಸ್ಥೆ’ ಅಧ್ಯಕ್ಷ ವೀರನಗೌಡ ಬಸನಗೌಡ ಪಾಟೀಲ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ.

‘ಕೊಪ್ಪಳದ ನಿವಾಸಿ ಶರಣಪ್ಪ ಕೋಣಿ ಎಂಬುವರ ಮೂಲಕ ಪರಿಚಯವಾಗಿದ್ದ ವೀರನಗೌಡ, ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ₹15 ಲಕ್ಷ ಪಡೆದುಕೊಂಡು ವಂಚಿಸಿದ್ದಾನೆ’ ಎಂದು ಆರೋಪಿಸಿ ಲಕ್ಷ್ಮಣ ಎಂಬುವರು ವಿಜಯನಗರ ಠಾಣೆಗೆ ದೂರು ನೀಡಿದ್ದಾರೆ. ಅದನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಜೈಲಿನಲ್ಲಿರುವ ಆರೋಪಿಯನ್ನು ಸದ್ಯದಲ್ಲೇ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

‘ವಿಜಯಪುರ, ಗದಗ, ಬಾಗಲಕೋಟೆ, ಕೊಪ್ಪಳ ಹಾಗೂ ರಾಮನಗರ ಜಿಲ್ಲೆಯ ಹಲವು ಅಭ್ಯರ್ಥಿಗಳಿಂದ ಆರೋಪಿಯು ₹80 ಲಕ್ಷ ಪಡೆದುಕೊಂಡು ವಂಚಿಸಿದ್ದಾನೆ. ಆತನ ಬಂಧನವಾಗುತ್ತಿದ್ದಂತೆ ಅಭ್ಯರ್ಥಿಗಳು ಒಬ್ಬೊಬ್ಬರಾಗಿ ಬಂದು ದೂರು ನೀಡುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !