ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ ನವಾಜ್‌ ಷರೀಫ್‌

ಬುಧವಾರ, ಜೂನ್ 26, 2019
22 °C

ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ ನವಾಜ್‌ ಷರೀಫ್‌

Published:
Updated:
Prajavani

ಇಸ್ಲಾಮಾಬಾದ್‌: ಅಲ್‌ ಅಜೀಜಿಯಾ ಸ್ಟೀಲ್‌ ಮಿಲ್‌ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್‌ ಷರೀಫ್‌ ಅವರು ಇಸ್ಲಾಮಾಬಾದ್‌ ಹೈಕೋರ್ಟ್‌ಗೆ ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಲು ಜಾಮೀನು ನೀಡಬೇಕು ಎಂದು ಕೋರಿ ನವಾಜ್ ಷರೀಫ್ ಈ ತಿಂಗಳ ಮೊದಲ ವಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿತ್ತು. ಈಗ ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪಾಕಿಸ್ತಾನ ಬಿಟ್ಟು ತೆರಳುವಂತಿಲ್ಲ ಎಂಬ ಷರತ್ತಿನೊಂದಿಗೆ ಈ ಹಿಂದೆ ಷರೀಫ್‌ ಅವರಿಗೆ ನೀಡಿದ್ದ ಆರು ತಿಂಗಳ ಜಾಮೀನು ಅವಧಿ ಮೇ 6ರಂದು ಕೊನೆಗೊಂಡಿತ್ತು. ಮೇ 7ರಿಂದ ಷರೀಫ್‌ ಅವರ ಜೈಲು ವಾಸ ಮುಂದುವರೆದಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !