ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿ ರಮ್ಯಾ!

Last Updated 2 ಸೆಪ್ಟೆಂಬರ್ 2016, 10:00 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಕಾಣಿಸಿಕೊಂಡಿರುವಂತಹ ಫೋಟೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ರಮ್ಯಾ ಅವರು ಮಹಾತ್ಮ ಗಾಂಧಿ, ಜವಾಹರ್‌ ಲಾಲ್‌ ನೆಹರೂ, ವಲ್ಲಭಾಯಿ ಪಟೇಲ್‌ ಸೇರಿದಂತೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಜೊತೆ ಇರುವಂತಹ ಚಿತ್ರಗಳು ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಟ್ವಿಟರ್‌ಗಳಲ್ಲಿ ಹರಿದಾಡುತ್ತಿವೆ.


 


ಕೆಲ ದಿನಗಳ ಹಿಂದೆ ರಮ್ಯಾ, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ ಎಂಬ ವಿವಾದಿತ ಹೇಳಿಕೆ ನೀಡಿದ್ದರು.



 

ರಮ್ಯಾ ಸ್ವಾತಂತ್ರ್ಯ ಹೋರಾಟಗಾರರ ಜೊತೆ ಇರುವಂತಹ ಚಿತ್ರಗಳನ್ನು ಎಡಿಟ್‌ ಮಾಡಿರುವ ‘ಚಾಲಾಕಿ’ಗಳು ಇತಿಹಾಸವನ್ನು ‘ಮರುಸೃಷ್ಟಿ’ ಮಾಡಿದ್ದಾರೆ.





ಈ ಚಿತ್ರಗಳಿಗೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ರಮ್ಯಾ, ‘ನಾವು ಇನ್ನೂ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದೇವೆ. ಈ ಚಿತ್ರಗಳನ್ನು ಸೃಷ್ಟಿಸಿದವರಿಗೆ ಧನ್ಯವಾದಗಳು’ ಎಂದಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT