ಹಿಂಸೆಯಿಂದ ಪರಿಹಾರ ಸಾಧ್ಯವಿಲ್ಲ; ಶಾಂತಿ ಕಾಪಾಡಿ: ವೆಂಕಯ್ಯ ನಾಯ್ಡು

7

ಹಿಂಸೆಯಿಂದ ಪರಿಹಾರ ಸಾಧ್ಯವಿಲ್ಲ; ಶಾಂತಿ ಕಾಪಾಡಿ: ವೆಂಕಯ್ಯ ನಾಯ್ಡು

Published:
Updated:
ಹಿಂಸೆಯಿಂದ ಪರಿಹಾರ ಸಾಧ್ಯವಿಲ್ಲ; ಶಾಂತಿ ಕಾಪಾಡಿ: ವೆಂಕಯ್ಯ ನಾಯ್ಡು

ನವದೆಹಲಿ: ಹಿಂಸಾಚಾರದಿಂದ ಪರಿಹಾರ ಸಿಗುವುದಿಲ್ಲ. ಶಾಂತಿ ಕಾಪಾಡಿ. ಪ್ರತಿಭಟನೆ ಹೆಸರಲ್ಲಿ ಹಿಂಸಾಚಾರ ಸಹಿಸಲಾಗುವುದಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಕರ್ನಾಟಕ ಹಾಗೂ ತಮಿಳು ನಾಡು ಜನರಿಗೆ ಮನವಿ ಮಾಡಿದರು.ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಕಾವೇರಿ ವಿಚಾರವಾಗಿ ನಡೆದಿರುವ ಹಿಂಸಾಚಾರ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವಿವಾದವನ್ನು ರಸ್ತೆಯಲ್ಲಿ ಬಗೆಹರಿಸಲು ಸಾಧ್ಯವಿಲ್ಲ. ಯಾರೂ ಜನರನ್ನು ಪ್ರಚೋದಿಸುವ ಕೆಲಸ ಮಾಡಬಾರದು ಎಂದು ಎಚ್ಚರಿಸಿದರು.ಕರ್ನಾಟಕ ಹಾಗೂ ತಮಿಳುನಾಡು ಜನರು ಶಾಂತಿ ಕಾಪಾಡುವಂತೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮನವೊಲಿಸಬೇಕು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry