ಕಾಜಿರಂಗದಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿ

7

ಕಾಜಿರಂಗದಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿ

Published:
Updated:
ಕಾಜಿರಂಗದಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿ

ಗುವಾಹಟಿ: ಕಾಜಿರಂಗ ರಾಷ್ಟ್ರೀಯ ಉದ್ಯಾನದ ಸಮೀಪ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಸಿಡಿಸಿದ ಗುಂಡಿಗೆ ಇಬ್ಬರು ನಾಗರಿಕರು ಬಲಿಯಾಗಿದ್ದಾರೆ.ಕಾಜಿರಂಗ ರಾಷ್ಟ್ರೀಯ ಉದ್ಯಾನದ ಸುತ್ತಲಿನ ಹಳ್ಳಿಗರನ್ನು ಒಕ್ಕಲೆಬ್ಬಿಸುವುದನ್ನು ವಿರೋಧಿಸಿ  ಹಾಗೂ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಸ್ಥಳೀಯರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಗುಂಪು ಚದುರಿಸಲು ಗುಂಡು ಹಾರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗುಂಡೇಟಿನಿಂದ ಇಬ್ಬರು ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.ಡಿಯೊಚರ್ಚಾಂಗ್, ಬಂಡೆರ್ದುಬಿ ಹಾಗೂ ಪಲ್ಖೋವಾ ಹಳ್ಳಿಗಳಿಂದ ಜನರನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಗುವಾಹಟಿ ಹೈ ಕೋರ್ಟ್ ಆದೇಶಿಸಿತ್ತು. ಕೋರ್ಟ್ ಆದೇಶ ಪಾಲನೆಗೆ ಅಸ್ಸಾಂ ಸರ್ಕಾರ ಮುಂದಾಗಿತ್ತು.

ಈಗಾಗಲೇ ಬಂಡೆರ್ದುಬಿ ಇಂದ 190 ಕುಟುಂಬಗಳು ಹಾಗೂ  ಡಿಯೊಚರ್ಚಾಂಗ್‌ನಿಂದ160 ಕುಟುಂಬಗಳನ್ನು ಒಕ್ಕಲೆಬ್ಬಿಸಲಾಗಿದೆ. ಆನೆಗಳು, ಅಗೆಯುವ ಯಂತ್ರಗಳು ಹಾಗೂ ರೋಲರ್‌ಗಳನ್ನು ಬಳಸಿ ಮನೆಗಳನ್ನು ನೆಲಸಮಗೊಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry