ಗುರುವಾರ , ಜೂಲೈ 9, 2020
23 °C

ಅಮೆರಿಕದ ಸಹಕಾರ ಕೋರಿದ ಷರೀಫ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್‌ (ಪಿಟಿಐ): ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರಿ ಅವರ ಭೇಟಿ ವೇಳೆ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿರುವ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರು, ವಿವಾದದ ಸಂಬಂಧ ನಿರ್ಣಯ ತೆಗೆದುಕೊಳ್ಳುವಲ್ಲಿ ಅಮೆರಿಕ ಪ್ರಮುಖ ಪಾತ್ರ ವಹಿಸುವಂತೆ ಕೋರಿದ್ದಾರೆ.‘ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಶಾಂತಿಯುತ ನಿರ್ಣಯ ತೆಗೆದುಕೊಳ್ಳಲು ಪಾತ್ರ ವಹಿಸುವಂತೆ ಪ್ರಧಾನಿ ಷರೀಫ್ ಅಮೆರಿಕವನ್ನು ಕೋರಿದ್ದಾರೆ ಮತ್ತು ಆಕ್ರಮಿತ ಕಾಶ್ಮೀರದಲ್ಲಿನ ಮಾನವಹಕ್ಕುಗಳ ಉಲ್ಲಂಘನೆಯ ಕುರಿತು ಪ್ರಸ್ತಾಪಿಸಿದ್ದಾರೆ’ ಎಂದು ವಿಶ್ವಸಂಸ್ಥೆಯ ಪಾಕಿಸ್ತಾನದ ರಾಯಭಾರಿ ಮಲೀಯಾ ಲೋಧಿ ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.