ಸಂಯಮ ಕಾಪಾಡಲು ಚೀನಾ ಸಲಹೆ

ಬೀಜಿಂಗ್ : ಭಾರತ ಮತ್ತು ಪಾಕಿಸ್ತಾನ ಸಂಯಮ ಕಾಪಾಡಿಕೊಂಡು ಮಾತುಕತೆ ಮೂಲಕ ವಿವಾದಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಚೀನಾ ಸಲಹೆ ನೀಡಿದೆ.
ಉರಿಯಲ್ಲಿ ಉಗ್ರರ ದಾಳಿ ನಡೆಸಿದ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಚೀನಾ, ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕೋರಿದೆ.
‘ಭಾರತ ಮತ್ತು ಪಾಕಿಸ್ತಾನ ಮುಖಂಡರು ನಿರಂತರ ಮಾತುಕತೆ ಮೂಲಕ ವಿವಾದಗಳನ್ನು ಬಗೆಹರಿಸಿಕೊಳ್ಳಬೇಕು’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲು ಕಾಂಗ್ ತಿಳಿಸಿದ್ದಾರೆ.
‘ಚೀನಾ ಎಲ್ಲ ರೀತಿಯ ಭಯೋತ್ಪಾದನೆಯನ್ನು ವಿರೋಧಿಸುತ್ತದೆ. ಭಯೋತ್ಪಾದನೆ ನಿಗ್ರಹಿಸಲು ಅಂತರರಾಷ್ಟ್ರೀಯ ಮಟ್ಟದ ಸಹಕಾರವನ್ನು ಹೆಚ್ಚಿಸಬೇಕಾದ ಅಗತ್ಯವಿದೆ’ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.