ಹಾಡು ನಿಲ್ಲಿಸಲಿರುವ ಗಾನ ಕೋಗಿಲೆ

7

ಹಾಡು ನಿಲ್ಲಿಸಲಿರುವ ಗಾನ ಕೋಗಿಲೆ

Published:
Updated:
ಹಾಡು ನಿಲ್ಲಿಸಲಿರುವ ಗಾನ ಕೋಗಿಲೆ

ಬೆಂಗಳೂರು: ಹಿರಿಯ ಗಾಯಕಿ ಎಸ್‌. ಜಾನಕಿ ಅವರು ತಮ್ಮ ಗಾಯನವನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ. ಮಲಯಾಳದ ‘10 ಕಲ್ಪನಕಳ್‌’ ಚಿತ್ರದ ‘ಅಮ್ಮಪೂವಿನು’ ಗೀತೆ ಅವರ ವೃತ್ತಿ ಬದುಕಿನ ಕೊನೆಯ ಹಾಡಾಗಲಿದೆ.

1957ರಲ್ಲಿ ತೆರೆಕಂಡ ತಮಿಳು ಚಿತ್ರ ‘ವಿಧಿಯಿನ್‌ ವಿಳಯತ್ತು’ ಚಿತ್ರದ ಮೂಲಕ ಹಿನ್ನೆಲೆ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ ಜಾನಕಿ ಕನ್ನಡ, ತಮಿಳು, ತೆಲುಗು, ಮಲಯಾಳ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ದನಿಯಾಗಿದ್ದಾರೆ.

‘ನನಗೆ ವಯಸ್ಸಾಯಿತು. ಈವರೆಗೆ ಹಲವು ಭಾಷೆಗಳಲ್ಲಿ ಹಾಡಿದ್ದೇನೆ. ನನಗೀಗ ವಿಶ್ರಾಂತಿ ಬೇಕಿದೆ. ನಾನು ಹಾಡುವುದನ್ನು ಇನ್ನು ನಿಲ್ಲಿಸುತ್ತೇನೆ’ ಎಂದು 78 ವರ್ಷದ ಜಾನಕಿ ಹೇಳಿದ್ದಾರೆ.

‘ಮಲಯಾಳದ ‘ಅಮ್ಮಪೂವಿನು’ ಗೀತೆ ನಾನು ಹಾಡುವ ಕೊನೆಯ ಹಾಡಾಗಲಿದೆ. ನಾನು ಇನ್ನುಮುಂದೆ ರೆಕಾರ್ಡಿಂಗ್‌ನಲ್ಲಿ ಭಾಗವಹಿಸುವುದಿಲ್ಲ. ಯಾವುದೇ ಸಮಾರಂಭಗಳಲ್ಲೂ ಹಾಡುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಜಾನಕಿ ಅವರು ನಾಲ್ಕು ಬಾರಿ ರಾಷ್ಟ್ರೀಯ ಪ್ರಶಸ್ತಿ, 32 ಬಾರಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನಿಧನದ ಸುಳ್ಳು ಸುದ್ದಿ

ಎಸ್‌. ಜಾನಕಿ ಅವರು ಹಾಡುವುದನ್ನು ನಿಲ್ಲಿಸಲಿದ್ದಾರೆ ಅಷ್ಟೆ. ಆದರೆ. ಅವರು ಇಹಲೋಕ ತ್ಯಜಿಸಿದ್ದಾರೆ ಎಂಬ ಸುಳ್ಳು ಸುದ್ದಿ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿದೆ. ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ 2010ರಲ್ಲೂ ಹರಿದಾಡಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry