ಖ್ಯಾತ ಮನೋವೈದ್ಯ ಡಾ. ಅಶೋಕ್ ಪೈ ನಿಧನ

7

ಖ್ಯಾತ ಮನೋವೈದ್ಯ ಡಾ. ಅಶೋಕ್ ಪೈ ನಿಧನ

Published:
Updated:
ಖ್ಯಾತ ಮನೋವೈದ್ಯ ಡಾ. ಅಶೋಕ್ ಪೈ ನಿಧನ

ಸ್ಕಾಟ್ಲೆಂಡ್‍: ಖ್ಯಾತ ಮನೋವೈದ್ಯ ಡಾ.ಅಶೋಕ್ ಪೈ ಗುರುವಾರ ಮಧ್ಯರಾತ್ರಿ 12ಕ್ಕೆ (ಭಾರತೀಯ ಕಾಲಮಾನ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 69 ವಯಸ್ಸಾಗಿತ್ತು.ವಿಚಾರ ಸಂಕಿರಣಕ್ಕಾಗಿ ಪತ್ನಿ ರಜನಿ ಪೈ ಅವರ ಜತೆಗೆ ಸ್ಕಾಟ್ಲೆಂಡ್‍ಗೆ ತೆರಳಿದ್ದ ಅವರಿಗೆ ನಿನ್ನೆ ಹೃದಯಾಘಾತವಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಶಿವಮೊಗ್ಗದಲ್ಲಿ ಮಾನಸ ನರ್ಸಿಂಗ್ ಹೋಮ್ ಆಸ್ಪತ್ರೆ ನಡೆಸುತ್ತಿದ್ದ ಪೈ ಅವರು ಕಾಡಿನ ಬೆಂಕಿ, ಉಷಾಕಿರಣ ಮೊದಲಾದ ಸಿನಿಮಾಗಳನ್ನು ನಿರ್ಮಿಸಿದ್ದರು.ಕರ್ನಾಟಕ ಮಾನಸಿಕ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪೈ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯೂ ಸೇರಿದಂತೆ ಹಲವು ಗೌರವ ಸಂದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry