ಕುಲಾಂತರಿ ಸಾಸಿವೆಗೆ ‘ಸುಪ್ರೀಂ’ ತಡೆ

7

ಕುಲಾಂತರಿ ಸಾಸಿವೆಗೆ ‘ಸುಪ್ರೀಂ’ ತಡೆ

Published:
Updated:

ನವದೆಹಲಿ : ಕುಲಾಂತರಿ ಸಾಸಿವೆಯನ್ನು ವಾಣಿಜ್ಯ ಉದ್ದೇಶಕ್ಕೆ ಬಿಡುಗಡೆ ಮಾಡುವುದಕ್ಕೆ ಸುಪ್ರೀಂಕೋರ್ಟ್‌ 10 ದಿನಗಳವರೆಗೆ ತಡೆಯಾಜ್ಞೆ ನೀಡಿದೆ.ಕುಲಾಂತರಿ ಸಾಸಿವೆಯನ್ನು ಬಿತ್ತನೆ ಉದ್ದೇಶಕ್ಕೆ ಬಿಡುಗಡೆ ಮಾಡುವ ಮೊದಲು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಬೇಕು ಎಂದು ಕೋರ್ಟ್‌, ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. ‘ಈ ತಿಂಗಳ 17ರವರೆಗೆ ಕುಲಾಂತರಿ ಸಾಸಿವೆಯನ್ನು ವಾಣಿಜ್ಯ ಉದ್ದೇಶಕ್ಕೆ ಬಿಡುಗಡೆ ಮಾಡಬಾರದು.ಅಂದು  (ಅ. 17) ಕೋರ್ಟ್‌ ಈ ಪ್ರಕರಣವನ್ನು ವಿವರವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ’ ಎಂದು ಮುಖ್ಯನ್ಯಾಯಮೂರ್ತಿ ಟಿ. ಎಸ್‌. ಠಾಕೂರ್‌ ಮತ್ತು ನ್ಯಾಯಮೂರ್ತಿ ಎ. ಎಂ ಖನ್ವಿಲ್ಕರ್‌ ಅವರಿದ್ದ ಪೀಠವು ಅಭಿಪ್ರಾಯಪಟ್ಟಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry