ಹಿಂಗಾರು ಬಿತ್ತನೆ ಅಲ್ಪ ಇಳಿಕೆ

7

ಹಿಂಗಾರು ಬಿತ್ತನೆ ಅಲ್ಪ ಇಳಿಕೆ

Published:
Updated:
ಹಿಂಗಾರು ಬಿತ್ತನೆ ಅಲ್ಪ ಇಳಿಕೆ

ನವದೆಹಲಿ: ಹಿಂಗಾರು ಹಂಗಾಮು ಅವಧಿಯ ಬಿತ್ತನೆ ಕಾರ್ಯ ಆರಂಭವಾಗಿದ್ದು, ಕಳೆದ ವರ್ಷಕ್ಕಿಂತ 5 ಲಕ್ಷ ಹೆಕ್ಟೇರ್‌ಗಳಷ್ಟು ಕಡಿಮೆ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ನವೆಂಬರ್‌ 4 ರವರೆಗೆ ಒಟ್ಟು 4.28 ಲಕ್ಷ ಹೆಕ್ಟೇರ್‌ಗಳಲ್ಲಿ ಗೋಧಿ ಬಿತ್ತನೆ ಕಾರ್ಯ ನಡೆದಿದೆ. ಕಳೆದ ವರ್ಷ 2.76 ಲಕ್ಷ ಹೆಕ್ಟೇರ್‌ಗಳಲ್ಲಿ ಬಿತ್ತನೆ ನಡೆದಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಬಿತ್ತನೆ ಪ್ರಮಾಣ ಶೇ 55 ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಹಿಂಗಾರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿದ ಬಳಿಕ ಯಾವ ಬೆಳೆಗಳನ್ನು ಬೆಳೆಯಬೇಕು ಎನ್ನುವ ನಿರ್ಧಾರಕ್ಕೆ ಬರಲು ರೈತರು ಕಾಯುತ್ತಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಭತ್ತ, ಎಣ್ಣೆಕಾಳುಗಳ ಬಿತ್ತನೆ  ಹೆಚ್ಚಾಗಿದೆ. ಆದರೆ, ಬೆಳೆಕಾಳುಗಳ ಬಿತ್ತನೆ ನಿರೀಕ್ಷಿತ ಪ್ರಮಾಣದಲ್ಲಿ ನಡೆದಿಲ್ಲ. ಕಳೆದ ವರ್ಷ 30. ಲಕ್ಷ ಹೆಕ್ಟೇರ್‌ಗಳಲ್ಲಿ ಬಿತ್ತನೆಯಾಗಿತ್ತು. ಈ ಬಾರಿ 24.16 ಲಕ್ಷ ಹೆಕ್ಟೇರ್‌ಗಳಲ್ಲಿ ಬಿತ್ತನೆಯಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry