ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷ

Last Updated 9 ನವೆಂಬರ್ 2016, 10:33 IST
ಅಕ್ಷರ ಗಾತ್ರ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ನಡುವಿನ ಜಿದ್ದಾಜಿದ್ದಿನ ಹಣಾಹಣಿಯಲ್ಲಿ ಗೆಲುವು ಸಾಧಿಸುವ ಮೂಲಕ ಟ್ರಂಪ್ ಅಮೆರಿಕದ ಅಧ್ಯಕ್ಷ ಸ್ಥಾನವನ್ನೇರಿದ್ದಾರೆ.

ಅಮೆರಿಕದ ಅಧ್ಯಕ್ಷರಾಗಲು 270 ಪ್ರತಿನಿಧಿಗಳ ಬೆಂಬಲ ಬೇಕಿತ್ತು. ಆದರೆ ಇಲ್ಲಿ ಟ್ರಂಪ್ 276 ಮತಗಳನ್ನು ಗಳಿಸಿ ಅಧ್ಯಕ್ಷ ಪಟ್ಟಕ್ಕೇರಿದ್ದಾರೆ. ಅಮೆರಿಕದ 45ನೇ ಅಧ್ಯಕ್ಷರಾಗಿದ್ದಾರೆ ಟ್ರಂಪ್

23 ಪ್ರಾಂತ್ಯಗಳಲ್ಲಿ ಗೆಲುವು ಸಾಧಿಸಿದ ಟ್ರಂಪ್ ಒಟ್ಟು 276 ಮತಗಳನ್ನು ಗಳಿಸಿ ಅಮೆರಿಕ ಅಧ್ಯಕ್ಷರಾಗಲು ಅರ್ಹತೆ ಗಿಟ್ಟಿಸಿದ್ದಾರೆ.  ಇತ್ತ, 13 ಪ್ರಾಂತ್ಯಗಳಲ್ಲಿ ಗೆಲುವು ಸಾಧಿಸಿದ್ದ ಹಿಲರಿ 218 ಮತಗಳನ್ನು ಗಳಿಸಿದ್ದಾರೆ.

</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT